ಡೆಹ್ರಾಡೂನ್: ಉತ್ತರಾಖಂಡದಲ್ಲಿ ರಾಷ್ಟ್ರಪತಿ ಆಡಳಿತವನ್ನು ಹೇರಿಕೆ ಮಾಡಲಾಗಿದ್ದರೂ ನೈನಿತಾಲ್ ಹೈಕೋರ್ಟ್ ಅಲ್ಲಿನ ಸರ್ಕಾರ ಬಹುಮತ ಸಾಬೀತುಪಡಿಸುವ ಅವಕಾಶವನ್ನು ಮಂಗಳವಾರ ನೀಡಿದೆ. ಹೈಕೋರ್ಟ್ನ ಈ ಆದೇಶವನ್ನು ಪ್ರಶ್ನಿಸಲು ಕೇಂದ್ರ ಮುಂದಾಗಿದೆ.
ಮಾ.31ರಂದು ಬಹುಮತವನ್ನು ಸಾಬೀತುಪಡಿಸಬೇಕು ಎಂದು ಹೈಕೋರ್ಟ್ ಹೇಳಿದೆ. ಅಲ್ಲದೇ ಇದರ ಫಲಿತಾಂಶವನ್ನು ವಿಧಾನಸಭೆಯಲ್ಲಿ ಘೋಷಣೆ ಮಾಡದೆ, ಮುಚ್ಚಿದ ಲಕೋಟೆಯಲ್ಲಿ ತನ್ನ ಮುಂದಿಡಬೇಕು ಎಂದು ಸೂಚಿಸಿದೆ.
ಬಹುಮತ ಸಾಬೀತು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಕಾಂಗ್ರೆಸ್ನ 9 ಬಂಡಾಯ ಶಾಸಕರಿಗೂ ಹೈಕೋರ್ಟ್ ಅವಕಾಶವನ್ನು ಕಲ್ಪಿಸಿದೆ. ಈ ಪ್ರಕ್ರಿಯೆಯ ಪರಿಶೀಲನೆಗೆ ನ್ಯಾಯಾಲಯ ಆಬ್ಸರ್ವರ್ ಒಬ್ಬರನ್ನು ನೇಮಿಸಿದೆ.
ಆದರೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಲು ಕೇಂದ್ರ ಮುಂದಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.