ಇಸ್ಲಾಮಾಬಾದ್: ಲಾಹೋರ್ನಲ್ಲಿ ಆತ್ಮಾಹುತಿ ಬಾಂಬ್ ದಾಳಿ ನಡೆದ ಬಳಿಕ ಪಾಕಿಸ್ಥಾನದ ಅಧಿಕಾರಿಗಳು ಒಟ್ಟು 5 ಸಾವಿರ ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈಸ್ಟರ್ ದಿನದಂದು ಲಾಹೋರ್ನ ಪೂರ್ವ ನಗರವೊಂದರ ಮೇಲೆ ಆತ್ಮಾಹುತಿ ದಾಳಿಯಾಗಿತ್ತು, ಇದರಲ್ಲಿ 70 ಮಂದಿ ಮೃತರಾಗಿ 300ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ 5 ಸಾವಿರ ಮಂದಿ ಶಂಕಿತರನ್ನು ವಶಕ್ಕೆ ಪಡೆಯಲಾಗಿತ್ತು. ಇದರಲ್ಲಿ 216 ಮಂದಿಯನ್ನು ಬಂಧಿಸಿ, ಬಳಿಕ ಇತರರನ್ನು ರಿಲೀಸ್ ಮಾಡಲಾಗಿದೆ.
ಈ 216 ಮಂದಿಯನ್ನು ಹೆಚ್ಚಿನ ತನಿಖೆಗೆ ಒಳಪಡಿಸಲಾಗಿದೆ ಎಂದು ಪಂಜಾಬ್ ಪ್ರಾಂತ್ಯದ ಸಚಿವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.