ನವದೆಹಲಿ: ಅಫ್ಜಲ್ ಗುರು ಕಾರ್ಯಕ್ರಮ ಏರ್ಪಡಿಸಿ, ದೇಶದ ವಿರುದ್ಧ ಘೋಷಣೆ ಕೂಗಿದ ಕಾರಣಕ್ಕೆ ಏಕಾಏಕಿ ಭಾರೀ ಸುದ್ದಿಗೆ ಬಂದ ದೆಹಲಿಯ ಜವಾಹರ್ ಲಾಲ್ ವಿಶ್ವವಿದ್ಯಾಲಯದಲ್ಲಿ ಈ ವರ್ಷ ಪ್ರವೇಶಾತಿ ಬಯಸಿದ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಭಾರೀ ಕುಸಿತ ಕಂಡಿದೆ.
ಜೆಎನ್ಯುನ ವಿವಿಧ ಕೋರ್ಸ್ಗಳಿಗೆ ಪ್ರವೇಶಾತಿ ಬಯಸುವ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಕುಸಿತ ಕಂಡಿದೆ ಎಂದು ಆಡಳಿತ ಮಂಡಳಿ ಹೇಳಿದೆ.
ಕಳೆದ ವರ್ಷ 79 ಸಾವಿರ ಅರ್ಜಿಗಳು ಬಂದಿದ್ದರೆ, ಈ ವರ್ಷ 72 ಸಾವಿರ ಅರ್ಜಿಗಳು ಬಂದಿವೆ.
ಆದರೆ ಇದು ದೇಶದ್ರೋಹ ವಿವಾದಕ್ಕೆ ಸಂಬಂಧಿಸಿದ ಕುಸಿತ ಅಲ್ಲ, ಪ್ರತಿ ವರ್ಷ ಈ ರೀತಿಯ ಏರಿಳಿತಗಳಾಗುತ್ತದೆ ಎಂದು ವಿಶ್ವವಿದ್ಯಾಲಯ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.