ಮೆಲ್ಬೋರ್ನ್: ಆಸ್ಟ್ರೇಲಿಯಾ ಪ್ರಧಾನಿ ಮಾಲ್ಕಮ್ ಟರ್ನ್ಬುಲ್ ಅವರನ್ನು ಭೇಟಿ ಮಾಡಿದ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಪ್ರಸ್ತುತ ಭಾರತದ ಆರ್ಥಿಕತೆ 7.6 ರಷ್ಟಿದ್ದು, ಇದನ್ನು ಇನ್ನಷ್ಟು ಏರಿಕೆಯಾಗಬೇಕಿದೆ ಎಂದು ಹೇಳಿದ್ದಾರೆ.
ಸಿಡ್ನಿಯಲ್ಲಿ ಮೇಕ್ ಇನ್ ಇಂಡಿಯಾ ಸಮಾರಂಭ ಉದ್ಘಟಿಸಿದ ಭಾಗವಹಿಸಿದ್ದ ಜೇಟ್ಲಿ ಅವರು, ಬಳಿಕ ಕ್ಯಾನ್ಬೆರಾದಲ್ಲಿ ನಡೆದ ಸಭೆಯಲ್ಲಿ ಎರಡು ರಾಷ್ಟ್ರಗಳ ನಡುವೆ ಆರ್ಥಿಕ ವಿನಿಮಯಕ್ಕೆ ಉತ್ತಮ ಅವಕಾಸವಿದೆ ಎಂದು ಹೇಳಿದ್ದಾರೆ. ಇದೇ ವೇಳೆ ಆಸ್ಟ್ರೇಲಿಯಾ ಪ್ರಧಾನಿ ಟರ್ನ್ಬುಲ್ ಅವರನ್ನು ಭಾರತಕ್ಕೆ ಭೇಟಿ ನೀಡುವಂತೆ ಮನವಿ ಮಾಡಿದ್ದಾರೆ.
ಈ ಸಂದರ್ಭ ಟರ್ನ್ಬುಲ್ ಅವರು ಮರುನಿರ್ಮಾಣ ಶಕ್ತಿ ಕ್ಷೇತ್ರದಲ್ಲಿ ಭಾರತದೊಂದಿಗೆ ಸಹಕಾರ ನೀಡುವ ಉತ್ಸುಕತೆಯನ್ನು ವ್ಯಕ್ತಪಡಿಸಿದ್ದಾರೆ.
ಆ ಬಳಿಕ ಜೇಟ್ಲಿ ಅವರು ಆಸ್ಟ್ರೇಲಿಯಾ ಸಚಿವ ಮ್ಯಾಥಿಯಾಸ್ ಕಾರ್ಮನ್ ಅವರನ್ನು ಭೇಟಿ ಮಾಡಿದ್ದಾರೆ.
ಜೇಟ್ಲಿ ಅವರು ಗುರುವಾರ ಸಂಜೆ ಆಸ್ಟ್ರೇಲಿಯಾ ನ್ಯಾಷನಲ್ ಯೂನಿವರ್ಸಿಟಿಯಲ್ಲಿ ಕೆ.ಆರ್. ನಾರಾಯಣನ್ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಷಣ ಮಾಡಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.