ನವದೆಹಲಿ: ಕೋಲ್ಕತಾದ ಫ್ಲೈಓವರ್ ಕುಸಿತದಿಂದ ಸಂಭವಿಸಿದ ಜೀವ ಹಾನಿಗೆ ಆಘಾತ ಹಾಗೂ ದುಃಖ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಜನರ ರಕ್ಷಣೆ ಹಾಗೂ ಪರಿಹಾರ ಕಾರ್ಯಾಚರಣೆಗೆ ಎಲ್ಲಾ ಸಂಭಾವ್ಯ ಸಹಕಾರ ನೀಡುವಂತೆ ಕೇಂದ್ರಕ್ಕೆ ಸೂಚಿಸಿದ್ದಾರೆ.
ಕೋಲ್ಕತಾದಲ್ಲಿ ನಿರ್ಮಾಣ ಹಂತದಲ್ಲಿರುವ ಫ್ಲೈಓವರ್ ಕುಸಿತದಿಂದ ಆಘಾತ ಮತ್ತು ದುಃಖವಾಗಿದೆ. ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದೆ. ಜೀವ ಕಳೆದುಕೊಂಡವರ ಕುಟುಂಬಗಳ ಪರ ನನ್ನ ಭಾವನೆಗಳಿವೆ. ಗಾಯಾಳುಗಳು ಬೇಗನೇ ಚೇತರಿಸಿಕೊಳ್ಳಲಿ ಎಂದು ಮೋದಿ ಅವರು ಟ್ವೀಟ್ ಮಾಡಿದ್ದಾರೆ.
ದೆಹಲಿಯ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿರುವ ಪ್ರಧಾನಿ ಮೋದಿ ಅವರು ರಕ್ಷಣಾ ಕಾರ್ಯಾಚರಣೆಗೆ ಸೇನೆ ಹಾಗೂ ಎನ್ಡಿಆರ್ಎಫ್ ಪಡೆಗಳನ್ನು ನಿಯೋಜಿಸುವಂತೆ ಸೂಚಿಸಿದ್ದಾರೆ.
ಈ ಘಟನೆಯಲ್ಲಿ ಹತ್ತಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, ಹಲವಾರು ಮಂದಿ ಅವಶೇಷಗಳಡಿ ಸಿಲುಕಿದ್ದಾರೆ.
ಈ ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ 5 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 3 ಲಕ್ಷ ರೂ. ಪರಿಹಾರ ಧನ ನೀಡುವುದಾಗಿ ಪಶ್ಚಿಮ ಬಂಗಾಳ ಸರ್ಕಾರ ಹೇಳಿದೆ.
ಘಟನೆಯ ಕುರಿತು ಮಾಹಿತಿ ಪಡೆಯಲು ಬಯಸಿದವರಿಗಾಗಿ 1070, 033-22143526, 033-22535185 ಸಹಾಯವಾಣಿ ಕೂಡ ಬಿಡುಗಡೆ ಮಾಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.