ತುಮಕೂರು : ಸಿದ್ಧಗಂಗಾ ಶ್ರೀಗಳಾದ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರು ಇಂದು 109 ನೇ ವಸಂತಕ್ಕೆ ಕಾಲಿರಿಸಿದ್ದಾರೆ. ತಮ್ಮ ಸೇವಾ ಕಾರ್ಯಗಳಿಂದ ರಾಜ್ಯ ಮಾತ್ರವಲ್ಲದೇ ರಾಷ್ಟ್ರಮಟ್ಟದಲ್ಲಿ ಹೆಸರುವಾಸಿಯಾಗಿರುವ ಶ್ರೀಗಳನ್ನು ನಡೆದಾಡುವ ದೇವರೆಂದೇ ಆರಾಧಿಸಲಾಗುತ್ತದೆ.
ತ್ರಿವಿಧ ದಾಸೋಹದ ಮೂಲಕ ಸಾವಿರಾರು ಜನರಿಗೆ ಆಶ್ರಯದಾತರಾಗಿದ್ದು, ರಾಜ್ಯದ ಜನತೆ ಜಾತಿಭೇಧವಿಲ್ಲದೇ ಶ್ರೀಗಳನ್ನು ಆರಾಧ್ಯ ದೈವವಾಗಿ ಪೂಜಿಸುತ್ತಿದ್ದಾರೆ. ಶ್ರೀಗಳ ಹುಟ್ಟುಹಬ್ಬಕ್ಕೆ ನಾಡಿನಾದ್ಯಂತದಿಂದ ಜನರು ಶುಭಕೋರಿದ್ದು ಇಂದು ಸಿದ್ಧಗಂಗಾ ಮಠದಲ್ಲಿ ವಿಶೇಷಪೂಜೆ ನಡೆಯುತ್ತಿದೆ.
ಪ್ರಧಾನಿ ನರೇಂದ್ರ ಮೋದಿಯವರು ಶ್ರೀಗಳಿಗೆ ಶುಭಕೋರಿ, Warm birthday wishes to the venerable Sree Sree Shivakumar Swamiji, whose distinguished service & noble deeds have impacted so many lives ಎಂದು ಟ್ವೀಟ್ ಮಾಡಿದ್ದಾರೆ. ಅವರ ಸೇವಾ ಕಾರ್ಯಗಳು ಮತ್ತು ಅವರು ಕೈಗೊಂಡ ಕೈಂಕರ್ಯಗಳು ತುಂಬಾ ಜನರ ಜೀವನದ ಮೇಲೆ ಉತ್ತಮ ಪ್ರಭಾವ ಬೀರಿದೆ ಎಂದಿದ್ದಾರೆ.
ಸಿಎಂ ಸಿದ್ದರಾಮಯ್ಯ ಸೇರಿದಂತೆ ರಾಜ್ಯ ಸಂಪುಟ ಸಹೋದ್ಯೋಗಿಗಳು ಮತ್ತು ನಾಡಿನಗಣ್ಯರು ಶ್ರೀಗಳಿಗೆ ಶುಭಹಾರೈಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.