ಚಂಡೀಗಢ: ಅರವಿಂದ್ ಕೇಜ್ರಿವಾಲ್ ಅವರು ಪಂಜಾಬ್ನಲ್ಲಿ ಹವಾ ಸೃಷ್ಟಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅವರ ಎಎಪಿ ಪಕ್ಷ ಅಲ್ಲಿನ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ 100 ಸ್ಥಾನಗಳನ್ನು ಪಡೆಯಲಿದೆ ಎಂದು ನೂತನ ಸಮೀಕ್ಷೆಯೊಂದು ತಿಳಿಸಿದೆ.
ಫೆಬ್ರವರಿಯಲ್ಲಿ ಹಫ್ಪೋಸ್ಟ್-ಸಿ ವೋಟರ್ ನಡೆಸಿದ ಸಮೀಕ್ಷೆಯಲ್ಲಿ ಪಂಜಾಬ್ನಲ್ಲಿ ಎಎಪಿ ಪರವಾದ ಅಲೆ ಇರುವುದು ಸ್ಪಷ್ಟವಾಗಿದೆ.
ಈ ಸಮೀಕ್ಷೆಯ ಪ್ರಕಾರ ಒಟ್ಟು 117 ಸ್ಥಾನಗಳಿರುವ ಚುನಾವಣೆಯಲ್ಲಿ ಎಎಪಿ ಚುನಾವಣೆಯಲ್ಲಿ 94-100 ಸ್ಥಾನಗಳನ್ನು ಪಡೆದುಕೊಳ್ಳಲಿದೆ.
ಎರಡನೇ ಸ್ಥಾನವನ್ನು ಕಾಂಗ್ರೆಸ್ ಪಡೆದುಕೊಂಡಿದ್ದು, 8-14 ಸ್ಥಾನಗಳನ್ನು ಗೆಲ್ಲಲಿದೆ. ಬಿಜೆಪಿ ಮತ್ತು ಎಸ್ಎಡಿ ಕೇವಲ 6-12 ಸ್ಥಾನಗಳನ್ನು ಮಾತ್ರ ಗೆಲ್ಲಲಿದೆ.
ಈಗ ಚುನಾವಣೆ ನಡೆದರೆ ಶೇ.48ರಷ್ಟು ಮತದಾರರು ಎಎಪಿಗೆ ಮತ ಹಾಕಲಿದ್ದಾರೆ ಎಂದು ಸಮೀಕ್ಷೆ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.