ಮುಂಬಯಿ; ನಾವು ಯಾವುದೇ ತರಹದ ಲಿಂಗ ತಾರತಮ್ಯದ ವಿರುದ್ಧವಾಗಿದ್ದೇವೆ ಮತ್ತು ದೇಗುಲಕ್ಕೆ ಮಹಿಳಾ ಪ್ರವೇಶವನ್ನು ಬೆಂಬಲಿಸುತ್ತೇವೆ ಎನ್ನುವ ಮೂಲಕ ಮಹಾರಾಷ್ಟ್ರ ಸರ್ಕಾರ ಬಾಂಬೆ ಹೈಕೋರ್ಟ್ ಮುಂದೆ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ.
ಶನಿ ಶಿಂಗನಾಪುರ ಸೇರಿದಂತೆ ಹಲವು ದೇಗುಲಗಳಿಗೆ ಮಹಿಳಾ ಪ್ರವೇಶ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್, ಈ ಬಗ್ಗೆ ಮಹಾರಾಷ್ಟ್ರ ಸರ್ಕಾರ ತನ್ನ ನಿಲುವು ಏನು ಎಂಬುದನ್ನು ಸ್ಪಷ್ಟಪಡಿಸಬೇಕೆಂದು ಸೂಚಿಸಿತ್ತು.
ಇದಕ್ಕೆ ಉತ್ತರಿಸಿರುವ ಮಹಾರಾಷ್ಟ್ರ ಸರ್ಕಾರ, ಯಾವುದೇ ತರನಾದ ಲಿಂಗ ತಾರತಮ್ಯಕ್ಕೆ ನಾವು ವಿರುದ್ಧವಾಗಿದ್ದೇವೆ. ಅಲ್ಲದೇ ಶೀಘ್ರದಲ್ಲೇ ಮಹಾರಾಷ್ಟ್ರ ಪ್ರೊವಿಷನ್ ಆಫ್ ಹಿಂದೂ ಪ್ಲೇಸ್ ಆಫ್ ವರ್ಶಿಸ್ (ಪ್ರವೇಶ ಅಧಿಕಾರ) ಕಾಯ್ದೆಯನ್ನು ಜಾರಿಗೊಳಿಸುತ್ತೇವೆ ಎಂದು ತಿಳಿಸಿದೆ.
ಮಹಿಳೆಯರ ಮೂಲಭೂತ ಹಕ್ಕನ್ನು ರಕ್ಷಣೆ ಮಾಡುವುದು ಸರ್ಕಾರಗಳ ಮೂಲಭೂತ ಕರ್ತವ್ಯವಾಗಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.