ನವದೆಹಲಿ: ರಾಷ್ಟ್ರೀಯ ತನಿಖಾ ದಳದ ಅಧಿಕಾರಿ ಮೊಹಮ್ಮದ್ ತಂಝಿಲ್ ಅಹ್ಮದ್ ಅವರನ್ನು ಅನಾಮಿಕ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದು 24 ಗಂಟೆಗಳು ಕಳೆದರೂ ಇನ್ನೂ ಅಪರಾಧಿಗಳ ಪತ್ತೆಯಾಗಿಲ್ಲ.
ಉತ್ತರಪ್ರದೇಶದ ಬಿಜ್ನೋರ್ನಲ್ಲಿ ಭಾನುವಾರ ಬೆಳಿಗ್ಗೆ ಇಬ್ಬರು ದುಷ್ಕರ್ಮಿಗಳು ಅವರನ್ನು ಗುಂಡಿಕ್ಕಿ ಕೊಲೆ ಮಾಡಿದ್ದರು, ಘಟನೆಯಲ್ಲಿ ಅವರ ಪತ್ನಿಗೂ ನಾಲ್ಕು ಘಟನೆಯಲ್ಲಿ ಅವರ ಪತ್ನಿಗೂ ನಾಲ್ಕು ಬುಲೆಟ್ಗಳು ತಾಗಿದ್ದು ಔಟ್ ಆಫ್ ಡೇಂಜರ್ನಲ್ಲಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಕುಟುಂಬದ ಮದುವೆ ಸಮಾರಂಭವನ್ನು ಮುಗಿಸಿ ದಂಪತಿಗಳು ತಮ್ಮ ಇಬ್ಬರು ಮಕ್ಕಳೊಂದಿಗೆ ಮನೆಗೆ ವಾಪಾಸ್ಸಾಗುತ್ತಿದ್ದಂತೆ ಈ ಘಟನೆ ನಡೆದಿದೆ.
ಇದೊಂದು ಹೈ ಪ್ರೊಫೈಲ್ ಕೊಲೆಯಾಗಿದ್ದು ಉತ್ತರಪ್ರದೇಶ ಪೊಲೀಸರು, ರಾಷ್ಟ್ರೀಯ ತನಿಖಾ ದಳ ಇದರ ಹಿಂದಿರುವವರು ಯಾರು ಎಂಬುದನ್ನು ಪತ್ತೆ ಹಚ್ಚುವಲ್ಲಿ ಇದುವರೆಗೆ ಯಶಸ್ವಿಯಾಗಿಲ್ಲ.
ಇಂಡಿಯನ್ ಮುಜಾಹಿದ್ದೀನ್ ಉಗ್ರ ಸಂಘಟನೆಗೆ ಸೇರಿದ ಪ್ರಕರಣಗಳ ತನಿಖೆಯನ್ನು ಇವರು ಕೈಗೆತ್ತಿಕೊಂಡಿದ್ದರು. ಹೀಗಾಗಿ ಇವರ ಕೊಲೆಯ ಹಿಂದೆ ಉಗ್ರರ ಕೈವಾಡವಿರುವ ಶಂಕೆಯೂ ಇದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.