ಬೆಂಗಳೂರು : ಪಿಯು ರಸಾಯನ ಶಾಸ್ತ್ರ ಪತ್ರಿಕೆ ಸೋರಿಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ. ಪ್ರಶ್ನೆಪತ್ರಿಕೆ 10 ಲಕ್ಷ ರೂ. ಮೌಲ್ಯಕ್ಕೆ ಬಹಿರಂಗ ಗೊಂಡಿದೆ ಎಂದು ತಿಳಿದು ಬಂದಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವೈದಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಅವರ ವಿಶೇಷ ಅಧಿಕಾರಿ ಓಬಳ್ ರಾಜು ಪ್ರಶ್ನೆ ಪತ್ರಿಕೆಯನ್ನು ಕೆಂಬ್ರಿಡ್ಜ್ ಶಾಲೆಯ ದೈಹಿಕ ಶಿಕ್ಷಕ ಮಂಜುನಾಥ ಮತ್ತು ಪಿಡಬ್ಲ್ಯುಡಿ ಅಧಿಕಾರಿ ರುದ್ರಪ್ಪ ಅವರಿಗೆ 10 ಲಕ್ಷ ರೂಗಳಿಗೆ ಮಾರಿದ್ದಾರೆ. ಇವರಿಬ್ಬರ ಮಕ್ಕಳು ಪಿಯು ತರಗತಿಯಲ್ಲಿ ಓದುತ್ತಿದ್ದು, ಮಕ್ಕಳ ವ್ಯಾಮೋಹಕ್ಕಾಗಿ ಈ ರೀತಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸದ್ಯಕ್ಕೆ ಈ ಮೂವರನ್ನು ಸಿಐಡಿ ಆಧಿಕಾರಿಗಳು ಬಂಧಿಸಿದ್ದು ಈ ಸಂಬಂಧ ಹೆಚ್ಚಿನ ತನಿಖೆ ನಡೆಸಲಿದ್ದಾರೆ.
ಕಳೆದ ಮೂರು ವರ್ಷಗಳಿಂದ ಪಿಯು ಪ್ರಶ್ನೆಪತ್ರಿಕೆಯನ್ನು ಸೋರಿಕೆ ಮಾಡುವಲ್ಲಿ ಮತ್ತು ಸಿಇಟಿ ಪ್ರಶ್ನೆಪತಿಕೆಗಳನ್ನು ಬಯಲು ಮಾಡುವಲ್ಲಿ ಓಬಳ್ ರಾಜು ಪ್ರಮುಖ ಪಾತ್ರ ವಹಿಸಿದ್ದಾನಿರಬಹುದು ಎಂಬ ಸಂಶಯವನ್ನು ಸಿಐಡಿ ಅಧಿಕಾರಿಗಳು ವ್ಯಕ್ತ ಪಡಿಸಿದ್ದಾರೆ.
ವಿಪಕ್ಷ ಪ್ರತಿಪಕ್ಷ ನಾಯಕರು ಈ ಬಗ್ಗೆ ಪತ್ರಿಕ್ರಿಯೆ ನೀಡಿದ್ದು ಒಂದೊಮ್ಮೆ ವೈದಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಅವರ ವಿಶೇಷ ಅಧಿಕಾರಿ ಭಾಗಿಯಾಗಿದ್ದಾರೆ ಎಂದಾದರೆ ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ. ಇಲ್ಲದಿದ್ದಲ್ಲಿ ತನಿಖೆ ಹಳ್ಳ ಹಿಡಿಯಲಿದೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.