ಚೆನ್ನೈ: ತಮಿಳುನಾಡಿನ ದೇವಾಲಯಗಳಿಗೆ ಪೂಜೆ ಸಲ್ಲಿಸಲು ಭೇಟಿ ನೀಡುವ ಭಕ್ತರು ವಸ್ತ್ರ ಸಂಹಿತೆಯನ್ನು ಪಾಲಿಸಬೇಕೆಂದು ಏಕಸದಸ್ಯ ಪೀಠ ತಮಿಳುನಾಡು ಸರ್ಕಾರಕ್ಕೆ ನೀಡಿದ ಆದೇಶವನ್ನು ಹೈಕೋರ್ಟ್ ವಜಾಗೊಳಿಸಿದೆ.
ಈ ಕುರಿತಂತೆ ತಮಿಳುನಾಡು ಸರ್ಕಾರದ ಮನವಿಯನ್ನು ಸ್ವೀಕರಿಸಿದ ನ್ಯಾ. ವಿ. ರಾಮಸುಬ್ರಮಣಿಯನ್ ಹಾಗೂ ಕೆ.ರವಿಚಂದ್ರಬಾಬು ಅವರ ವಿಭಾಗೀಯ ನ್ಯಾಯಪೀಠವು ‘ಈ ವಿಷಯವು ಕಕ್ಷಿದಾರ ಮತ್ತು ದಾವೆದಾರರ ಸಮ್ಮುಖದಲ್ಲೇ ತೀರ್ಮಾನವಾಗಬೇಕಾಗಿದ್ದು, ಈಗ ಅವರ ಅನುಪಸ್ಥಿತಿಯಲ್ಲಿ ಇದನ್ನು ತೀರ್ಮಾನಿಸಲಾಗುವುದಿಲ್ಲ. ನ್ಯಾಯಾಲಯ ಈ ವಿಷಯದಲ್ಲಿ ಗೊಂದಲಗಳನ್ನು ಸೃಷ್ಟಿಸಲು ಇಚ್ಛಿಸುವುದಿಲ್ಲ’ ಎಂದು ಹೇಳಿದೆ.
ಆದ್ದರಿಂದ ಏಕಸದಸ್ಯ ಪೀಠ ನಿರ್ದೇಶನವನ್ನು ಒಪ್ಪಲಾಗುವುದಿಲ್ಲ. ಇದರ ಬಗ್ಗೆ ಯಾವುದೇ ದಾವೆ ಬರುವ ತನಕ ಇದನ್ನು ಕಾಯ್ದಿರಿಸುವ ಅನಿರ್ವಾರ್ಯತೆ ಇದೆ ಎಂದು ಅವರು ಹೇಳಿದ್ದಾರೆ.
ಈ ಮೂಲಕ ತಮಿಳುನಾಡಿನ ದೇವಾಲಯಗಳಿಗೆ ಭೇಟಿ ನೀಡುವ ಭಕ್ತರು ವಸ್ತ್ರ ಸಂಹಿತೆ ಬಗ್ಗೆ ತಲೆಕೆಡಿಸಿಕೊಳ್ಳುವಂತಿಲ್ಲ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.