ನವದೆಹಲಿ: ವಿಮಾನಯಾನ ಸಂಪರ್ಕ ಉತ್ತಮಗೊಳಿಸಲು ಸರ್ಕಾರ 25 ಪ್ರದೇಶಿಕ ವಿಮಾನ ನಿಲ್ದಾಣಗಳನ್ನು ಅಭಿವೃದ್ಧಿಪಡಿಸಲಿದೆ. ೨೫ ಹೊಸ ನಿಲ್ದಾಣಗಳನ್ನು ನಿರ್ಮಿಸುವ ಗುರಿ ಹೊಂದಿದೆ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
ಮೂಲಸೌಕರ್ಯಕ್ಕೆ ದೀರ್ಘಕಾಲಿಕ ಬಂಡವಾಳ ಹೊಂದುವ ಅಗತ್ಯವಿದೆ. ರಾಜ್ಯ ಸರ್ಕಾರ ಒಡೆತನದ 15 ವಿಮಾನ ನಿಲ್ದಾಣಗಳು ಹಾಗೂ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) ಒಡೆತನದ 10 ನಿಲ್ದಾಣಗಳ ಅಭಿವೃದ್ಧಿಪಡಿಸಲು ಸರ್ಕಾರ ಯೋಜನೆ ಹೊಂದಿದೆ ಎಂದು ಅವರು ಹೇಳಿದ್ದಾರೆ.
ಒಟ್ಟು 160 ನಿಲ್ದಾಣಗಳು ಉಪಯೋಗಿಸದೆ ಪಾಳು ಬಿದ್ದಿವೆ. ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ನಡೆಸಲಾಗುತ್ತಿರುವ ದೆಹಲಿ ಹಾಗೂ ಮುಂಬಯಿ ನಿಲ್ದಾಣಗಳಿಂದ ಎಎಐ ಬಂಡವಾಳ ಹೊಂದಿಸಬಹುದಾಗಿದೆ. ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರ ಯೋಜನೆ ರೂಪಿಸುತ್ತಿದೆ ಎಂದು ಜೇಟ್ಲಿ ಅವರು ಹೇಳಿದ್ದಾರೆ.
ಅಭಿವೃದ್ಧಿಪಡಿಸಲಾಗಿರುವ ನಿಲ್ದಾಣಗಳ ಕಾರ್ಯನಿರ್ವಹಣೆಯನ್ನು ಖಾಸಗಿ ವಲಯಗಳಿಗೆ ನೀಡಬಹುದಾಗಿದೆ. ವಿಮಾನ ಪ್ರಯಾಣಿಕರ ಸಂಖ್ಯೆ ಏರುತ್ತಿದ್ದು, ಈ ಮಧ್ಯೆ ಕೇಂದ್ರ ಸರ್ಕಾರ ಪ್ರಾದೇಶಿಕ ವಿಮಾನ ಸಂಪರ್ಕ ಅಭಿವೃದ್ಧಿಗೆ ಎಲ್ಲಾ ರೀತಿಯ ಪ್ರಯತ್ನ ನಡೆಸುತ್ತಿದೆ ಎಂದು ಅರುಣ್ ಜೇಟ್ಲಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.