ನವದೆಹಲಿ: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(ಐಐಟಿ)ಗಳ ಶುಲ್ಕವನ್ನು ದುಪ್ಪಟ್ಟುಗೊಳಿಸುವ ಪ್ರಸ್ತಾವನೆಗೆ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಗುರುವಾರ ಅನುಮತಿ ನೀಡಿದೆ.
ಹೀಗಾಗಿ ಮುಂದಿನ ಶೈಕ್ಷಣಿಕ ವರ್ಷದಿಂದ 90 ಸಾವಿರ ಇದ್ದ ಐಐಟಿ ಕೋರ್ಸುಗಳ ಶುಲ್ಕ 2 ಲಕ್ಷಕ್ಕೆ ಏರಿಕೆಯಾಗಲಿದೆ.
ಕಳೆದ ತಿಂಗಳು ಐಐಟಿ ಪ್ಯಾನಲ್ ವಾರ್ಷಿಕ ಶುಲ್ಕವನ್ನು ದುಪ್ಪಟ್ಟುಗೊಳಿಸುವ ಪ್ರಸ್ತಾವನೆಗೆ ಸಮ್ಮತಿ ಸೂಚಿಸಿತ್ತು.
ಐಐಟಿ ಕೌನ್ಸಿಲ್ನ ಸ್ಟ್ಯಾಂಡಿಂಗ್ ಕಮಿಟಿ, ಐಐಟಿ ನಿರ್ದೇಶಕರನ್ನೊಳಗೊಂಡ ಮಂಡಳಿ ಮತ್ತು ಹಿರಿಯ ಅಧಿಕಾರಿಗಳು ಐಐಟಿ ಫೀಸುಗಳಲ್ಲಿ ಮೂರು ಪಟ್ಟು ಹೆಚ್ಚಳಕ್ಕೆ ಆಗ್ರಹಿಸಿದ್ದರು.
ದೇಶದಾದ್ಯಂತ ಐಐಟಿಗಳಲ್ಲಿ ದಲಿತರು, ವಿಕಲಚೇತನರು, ಹಿಂದುಳಿದ ವರ್ಗದವರ ಶುಲ್ಕವನ್ನು ಶೇ.10ರಷ್ಟು ಕಡಿತಗೊಳಿಸುವ ಭರವಸೆಯನ್ನು ಸಚಿವೆ ಸ್ಮೃತಿ ಇರಾನಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.