ಶ್ರೀನಗರ: ಜಮ್ಮು ಕಾಶ್ಮೀರದ ಎನ್ಐಟಿ(ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ)ಯಲ್ಲಿ ನಡೆದ ಕಲಹಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಅಲ್ಲಿನ ಸರ್ಕಾರ ಮುಂದಾಗಿದೆ.
ಎನ್ಐಟಿನಲ್ಲಿ ಸ್ಥಳೀಯ ಮತ್ತು ಹೊರಗಿನ ವಿದ್ಯಾರ್ಥಿಗಳ ನಡುವೆ ತೀವ್ರ ಸ್ವರೂಪದ ಜಟಾಪಟಿ ಏರ್ಪಟ್ಟಿತ್ತು. ಈಗಲೂ ಅಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರೆದಿದ್ದು ನೂತನವಾಗಿ ರಚನೆಗೊಂಡ ಪಿಡಿಪಿ-ಬಿಜೆಪಿ ಸರ್ಕಾರಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಕಳೆದ ಎರಡು ದಿನಗಳಿಂದ ಸ್ಥಳಿಯೇತರ ವಿದ್ಯಾರ್ಥಿಗಳು ಅಲ್ಲಿ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ.
ಬುಧವಾರ ಕಾಲೇಜಿಗೆ ಆಗಮಿಸಿದ್ದ ಕೇಂದ್ರ ಸರ್ಕಾರದ ಮೂವರು ಅಧಿಕಾರಿಗಳನ್ನೊಳಗೊಂಡ ಸಮಿತಿ ವಿದ್ಯಾರ್ಥಿ ಕಲಹದ ಬಗ್ಗೆ ಸಂಪೂರ್ಣ ಪರಿಶೀಲನೆಯನ್ನು ನಡೆಸಿದೆ.
ಇದೀಗ ಘಟನೆಯ ಬಗ್ಗೆ ತನಿಖೆ ನಡೆಸುವುದಾಗಿ ಜಮ್ಮು ಕಾಶ್ಮೀರದ ಉಪ ಮುಖ್ಯಮಂತ್ರಿ ನಿರ್ಮಲ್ ಸಿಂಗ್ ತಿಳಿಸಿದ್ದಾರೆ.
ವೆಸ್ಟ್ಇಂಡೀಸ್ ಮತ್ತು ಭಾರತ ನಡುವೆ ಕ್ರಿಕೆಟ್ ಪಂದ್ಯಾಟ ನಡೆಯುತ್ತಿದ್ದ ವೇಳೆ ಸ್ಥಳೀಯ ವಿದ್ಯಾರ್ಥಿಗಳು ವೆಸ್ಟ್ಇಂಡೀಸ್ ತಂಡಕ್ಕೆ ಮತ್ತು ಹೊರಗಿನ ವಿದ್ಯಾರ್ಥಿಗಳು ಭಾರತ ತಂಡಕ್ಕೆ ಚಿಯರ್ ಮಾಡುತ್ತಿದ್ದರು. ಇದುವೇ ಬಳಿಕ ದೊಡ್ಡ ಕಲಹಕ್ಕೆ ಕಾರಣವಾಯಿತು ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.