ನವದೆಹಲಿ: ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಕೇಜ್ರಿವಾಲ್ ವಿರುದ್ಧ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಟಿಯಾಲಾ ಹೈಕೋರ್ಟ್ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಎಎಪಿ ಪಕ್ಷದ ಐವರು ಸದಸ್ಯರಿಗೆ ಜಾಮೀನು ನೀಡಿದೆ. ಇವರ ಮುಂದಿನ ವಿಚಾರಣೆಯನ್ನು ಕೋರ್ಟ್ ಮೇ.೧೯ಕ್ಕೆ ಕಾಯ್ದಿರಿಸಿದೆ.
ತನ್ನ ಮತ್ತು ತನ್ನ ಕುಟುಂಬದ ವಿರುದ್ಧ ಕೇಜ್ರಿವಾಲ್ ಹಾಗೂ ಈ ಐವರು ಸದಸ್ಯರು ಮಾನಹಾನಿ ಹೇಳಿಕೆ ನೀಡಿದ್ದರು ಎಂದು ಆರೋಪಿಸಿ ಜೇಟ್ಲಿ ಅವರು ಪ್ರಕರಣ ದಾಖಲಿಸಿದ್ದರು.
ದೆಹಲಿಯ ಫಿರೋಜ್ ಫಾ ಕೋಟ್ಲಾ ಮೈದಾನ ನಿರ್ಮಾಣದ ವೇಳೆ ಜೇಟ್ಲಿ ಲಂಚ ಪಡೆದಿದ್ದರು ಎಂದು ಕೇಜ್ರಿವಾಲ್ ಮತ್ತು ತಂಡ ಆರೋಪಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.