ಶ್ರೀನಗರ: ಜಮ್ಮು ಕಾಶ್ಮೀರ ಲಿಬರೇಶನ್ ಫ್ರಾಂಟ್ನ ಮುಖ್ಯಸ್ಥ ಯಾಸೀನ್ ಮಲ್ಲಿಕ್ ಮತ್ತು ಆರ್ಯ ಸಮಾಜ್ ನಾಯಕ ಸ್ವಾಮಿ ಅಗ್ನಿವೇಶ್ ಅವರನ್ನು ಶನಿವಾರ ಬಂಧನಕ್ಕೊಳಪಡಿಸಲಾಗಿದೆ.
ಪ್ರತಿಭಟನೆಯ ವೇಳೆ ಯುವಕ ಮೃತಪಟ್ಟ ಸ್ಥಳಕ್ಕೆ ಇವರು ಭೇಟಿ ನೀಡಲು ಆಗಮಿಸುತ್ತಿದ್ದ ವೇಳೆ ಬಂಧಿಸಲಾಗಿದೆ. ಪ್ರತಿಭಟನೆ ತೀವ್ರ ಸ್ವರೂಪಪಡೆದುಕೊಳ್ಳುವ ಸಾಧ್ಯತೆಯ ಹಿನ್ನಲೆಯಲ್ಲಿ ಇವರನ್ನು ವಶಕ್ಕೆ ಪಡೆಯಲಾಗಿದೆ.
ಕಾಶ್ಮೀರಿ ಪಂಡಿತರಿಗೆ ಪ್ರತ್ಯೇಕ ಹೋಮ್ಟೌನ್ ಸ್ಥಾಪಿಸುವ ಸರ್ಕಾರದ ಪ್ರಸ್ತಾವಣೆಯ ವಿರುದ್ಧ ಮಲ್ಲಿಕ್ 30 ಗಂಟೆಗಳ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ. ಆದರೆ ಕಾಶ್ಮೀರಿ ಪಂಡಿತರು ತಮ್ಮ ತವರಿಗೆ ಆಗಮಿಸುವುದಕ್ಕೆ ತನ್ನ ಅಭ್ಯಂತರವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಪ್ರತ್ಯೇಕತಾವಾದಿ ಮಸರತ್ ಆಲಂ ಬಂಧನವನ್ನು ಖಂಡಿಸಿ ಕಣಿವೆ ರಾಜ್ಯದಲ್ಲಿ ಇಂದು ಬಂದ್ ನಡೆಸಲಾಗುತ್ತಿತ್ತು, ತೀವ್ರ ಸ್ವರೂಪದ ಪ್ರತಿಭಟನೆಯೂ ನಡೆಯುತ್ತಿದೆ. ಈ ವೇಳೆ ಸಿಆರ್ಪಿಎಫ್ ಯೋದರ ಗುಂಡಿಗೆ ಒರ್ವ ಯುವಕ ಬಲಿಯಾಗಿದ್ದಾನೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.