ನವದೆಹಲಿ: ಪಠಾನ್ಕೋಟ್ ವಾಯುನೆಲೆಯ ಮೇಲೆ ದಾಳಿ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ ಶುಕ್ರವಾರ ಜ್ಯಶೇ-ಇ-ಮೊಹಮ್ಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮೌಲಾನಾ ಮಸೂದ್ ಅಝರ್ ಮತ್ತು ಆತನ ಸಹೋದರ ಅಬ್ದುಲ್ ರಾವೂಫ್ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿಗೊಳಿಸಿದೆ.
ಮೊಹಾಲಿಯಲ್ಲಿರುವ ವಿಶೇಷ ಎನ್ಐಎ ನ್ಯಾಯಾಲಯ ’ಓಪನ್ ಎಂಡೆಡ್ ನಾನ್ ಬೇಲೇಬಲ್ ವಾರೆಂಟ್’ನ್ನು ಈ ಇಬ್ಬರು ಸಹೋದರರು ಮತ್ತು ಅವರ ಸಹಚರರಾದ ಕಾಶೀಫ್ ಜಾನ್, ಶೈದ್ ಲತೀಫ್ ವಿರುದ್ಧ ಜಾರಿಗೊಳಿಸಿದೆ.
ವಾಯುನೆಲೆಯ ಮೇಲೆ ಭಯೋತ್ಪಾದನ ದಾಳಿ ನಡೆಸಲು ಕುತಂತ್ರ ರೂಪಿಸಿದ ಆರೋಪದ ಮೇರೆಗೆ ಈ ದಾಳಿಯನ್ನು ನಡೆಸಲಾಗಿದೆ.
ಎನ್ಐಎ ಪ್ರಸ್ತುತಪಡಿಸಿದ ಸಾಕ್ಷ್ಯಾಧಾರಗಳನ್ನು ಗಮನಿಸಿ ನ್ಯಾಯಾಲಯ ಅರೆಸ್ಟ್ ವಾರೆಂಟ್ ಜಾರಿಗೊಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.