ಲಕ್ನೋ: ಎನ್ಐಎ ಅಧಿಕಾರಿ ತಂಝೀಲ್ ಅಹ್ಮದ್ ಅವರ ಹೈ ಪ್ರೊಫೈಲ್ ಹತ್ಯೆಗೆ ಸಂಬಂಧಿಸಿದಂತೆ ಇಬ್ಬರು ಶಂಕಿತರನ್ನು ಬಂಧಿಸುವಲ್ಲಿ ಉತ್ತರಪ್ರದೇಶ ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ.
ಮಂಗಳವಾರ ಬೆಳಿಗ್ಗೆ ಜೈನುಲ್ ಮತ್ತು ರೆಯಾನ್ ಎಂಬಿಬ್ಬರು ಶಂಕಿತ ಆರೋಪಿಗಳನ್ನು ಬಂಧಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನೂರಾರು ಮಂದಿಯನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ, ಕಳೆದ ಶುಕ್ರವಾರ ಆರೋಪಿಗಳ ಬಂಧನವಾಯಿತು ಎಂದು ಕೆಲ ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಆ ವರದಿಯನ್ನು ಪೊಲೀಸರು ತಳ್ಳಿ ಹಾಕಿದ್ದರು.
ಇದೀಗ ಪೊಲೀಸ್ ಮೂಲಗಳು ಇಬ್ಬರ ಬಂಧನವನ್ನು ಸ್ಪಷ್ಟಪಡಿಸಿವೆ.
ತಂಝೀಲ್ ಅಹ್ಮದ್ ಇಂಡಿಯನ್ ಮುಜಾಹಿದ್ದೀನ್ಗೆ ಸಂಬಂಧಪಟ್ಟ ಪ್ರಕರಣಗಳ ತನಿಖೆ ನಡೆಸುತ್ತಿದ್ದರು. ಹೀಗಾಗಿ ಅವರ ಕೊಲೆಯ ಹಿಂದೆ ಉಗ್ರರ ಕೈವಾಡವಿರುವ ಶಂಕೆಗಳೂ ವ್ಯಕ್ತವಾಗಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.