ಉಡುಪಿ : ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಬಿಜೆಪಿ ಜಯಭೇರಿ ಭಾರಿಸಿದ್ದು ಮುಂದಿನ ಚುನಾವಣೆಗೆ ಇದು ದಿಕ್ಸೂಚಿಯಾಗಲಿದೆ ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಕೆ. ಉದಯಕುಮಾರ್ ಶೆಟ್ಟಿ ಹೇಳಿದರು.
ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಉದ್ಯಾವರ ಕ್ಷೇತ್ರದಿಂದ ಜಯಗಳಿಸಿ ಅಧ್ಯಕ್ಷ ಗಾದಿಗೇರಲಿರುವ ದಿನಕರ ಅವರನ್ನು ಇತ್ತೀಚೆಗೆ ಸನ್ಮಾನಿಸಿ ಮಾತನಾಡಿದರು. ಸಾಮಾನ್ಯ ಚಹಾ ಮಾರುವ ವ್ಯಕ್ತಿ ಈ ದೇಶದ ಪ್ರಧಾನಿಯಾಗಬಹುದು ಎಂಬು ದನ್ನು ಮೋದಿ ಸಾಧಿಸಿ ತೋರಿಸಿದ್ದಾರೆ. ಅದೇ ರೀತಿ ಸಾಮಾನ್ಯ ಕಾರ್ಯಕರ್ತನೊಬ್ಬನಿಗೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷನಾಗುವ ಅವಕಾಶವನ್ನು ಸಹ ಬಿಜೆಪಿ ನೀಡಿದೆ. ಹಲವು ವರ್ಷಗಳಿಂದ ಪಕ್ಷಕ್ಕಾಗಿ ದುಡಿದ ದಿನಕರ ಅವರು ಮೀಸಲಾತಿ ಆಧಾರದ ಮೇಲೆ ಅಧ್ಯಕ್ಷರಾಗುತ್ತಿದ್ದಾರೆ ಎಂದರು.
ಬಿ.ಎಸ್. ಯಡಿಯೂರಪ್ಪ ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿ ದ್ದಾರೆ. ಅವರ ನೇತೃತ್ವದಲ್ಲಿ ಬಿಜೆಪಿ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಪಕ್ಷದ ಅಂಬಲಪಾಡಿ ಸ್ಥಾನೀಯ ಸಮಿತಿ ಅಧ್ಯಕ್ಷ ರಾಮರಾಜ್ ಕಿದಿಯೂರು ಅಧ್ಯಕ್ಷತೆ ವಹಿಸಿದ್ದರು.
ಅಂಬಲಪಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಮೋದ್ ಸಾಲ್ಯಾನ್, ಕಡೆಕಾರು ಗ್ರಾಮ ಪಂಚಾಯಿತಿ ಅಧ್ಯಕ್ಷ ರಘುನಾಥ್ ಕೋಟ್ಯಾನ್, ಅಲೆವೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೀಕಾಂತ್, ತಾಲ್ಲೂಕು ಪಂಚಾಯಿತಿ ಸದಸ್ಯರಾದ ರಾಜೇಂದ್ರ ಪಂದುಬೆಟ್ಟು, ಶಿಲ್ಪಾ ಆರ್. ಕೋಟ್ಯಾನ್, ತಾಲ್ಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ಗಣೇಶ್ಕುಮಾರ್, ಕಡೆಕಾರು ಸ್ಥಾನೀಯ ಸಮಿತಿ ಅಧ್ಯಕ್ಷ ರಿಕೇಶ್ ಪಾಲನ್, ಅಲೆವೂರು ಸ್ಥಾನೀಯ ಸಮಿತಿ ಅಧ್ಯಕ್ಷ ಅಶೋಕ್ ಶೆಟ್ಟಿಗಾರ್, ಗ್ರಾ, ಪಂಚಾಯಿತಿ ಉಪಾಧ್ಯಕ್ಷರಾದ ಉಷಾ ಕಿದಿಯೂರು, ಮಾಲತಿ ವಿ.ಶೆಟ್ಟಿ ಕಡೆಕಾರು, ಪಕ್ಷದ ಪ್ರಮುಖರುಗಳಾದ ಪ್ರವೀಣ್ಕುಮಾರ್ ಶೆಟ್ಟಿ ಕಪ್ಪೆಟ್ಟು, ಗಿರೀಶ್ ಅಮೀನ್ ಕಿದಿಯೂರು, ಪ್ರಶಾಂತ್ ಸಾಲ್ಯಾನ್ ಕುತ್ಪಾಡಿ, ಸಂತೋ ಷ್ ಕುಮಾರ್ ಬೊಲ್ಜೆ, ಜಗದೀಶ್ ಆಚಾರ್ಯ ಕಪ್ಪೆಟ್ಟು, ರಾಘವೇಂದ್ರ ಕುತ್ಪಾಡಿ, ಎ.ಯೋಗೀಶ್ ಶೆಟ್ಟಿ ಅಂಬಲ ಪಾಡಿ, ಎ. ಶಿವಕುಮಾರ್ ಅಂಬಲ ಪಾಡಿ, ಸಾಯಿನಾಥ್ ಕೋಟ್ಯಾನ್, ವಿಜಯ ಶೆಟ್ಟಿ, ಅಶೋಕ್ ಭಂಡಾರಿ, ವಿಜಯ ಭಟ್, ಗಿರೀಶ್ ಅಮೀನ್ ಅಂಬಲಪಾಡಿ ಉಪಸ್ಥಿತರಿದ್ದರು.
ಅಂಬಲಪಾಡಿ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಎ. ಶಿವಕುಮಾರ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಕಡೆಕಾರು ಗ್ರಾಮ ಪಂಚಾಯಿತಿ ಸದಸ್ಯ ರಾಘವೇಂದ್ರ ಕುತ್ಪಾಡಿ ವಂದಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.