ಚಂಡೀಗಢ: ಪ್ರತಿವರ್ಷ ಜೂನ್ 21ರಂದು ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಣೆ ಮಾಡಲಾಗುತ್ತಿದೆ, ಈ ಬಾರಿ ಚಂಡೀಗಢದಲ್ಲಿ ಯೋಗ ದಿನಾಚರಣೆ ನಡೆಯಲಿದ್ದು ಪ್ರಧಾನಿ ನರೇಂದ್ರ ಮೋದಿ ಇದರಲ್ಲಿ ಭಾಗವಹಿಸಲಿದ್ದಾರೆ.
ಕಳೆದ ವರ್ಷ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಮೊದಲ ವರ್ಷವಾಗಿದ್ದು, ನವದೆಹಲಿಯ ರಾಜಪಥದಲ್ಲಿ ಬೃಹತ್ ಸಮಾರಂಭವನ್ನು ಏರ್ಪಡಿಸಲಾಗಿತ್ತು. ೩೫ ನಿಮಿಷದಲ್ಲಿ ವಿವಿಧ ಆಸನಗಳನ್ನು ಪ್ರದರ್ಶಿಸಲಾಗಿತ್ತು. ಮೋದಿಯೂ ಇದರಲ್ಲಿ ಭಾಗವಹಿಸಿದ್ದರು.
ಈ ಬಾರಿ ಚಂಡೀಗಢದಲ್ಲಿ ಬೃಹತ್ ಯೋಗ ಸಮಾರಂಭವನ್ನು ನಡೆಸಲು ಕೇಂದ್ರ ನಿರ್ಧರಿಸಿದೆ, ಈ ಬಗ್ಗೆ ಅಲ್ಲಿನ ಆಡಳಿತಕ್ಕೆ ಆಯುಷ್ ಸಚಿವಾಲಯ ನಿರ್ದೇಶನವನ್ನೂ ನೀಡಿದೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.