ಜೋಧಪುರ: ಇಲ್ಲಿಯ ಭದಾಸಿಯಾ ನಗರದ ಸಂತ ರವಿದಾಸ ಕಾಲನಿಯಲ್ಲಿ ಮದ್ಯದಂಗಡಿ ಆರಂಭಿಸುವುದರ ವಿರುದ್ಧ ಸ್ಥಳೀಯರು ಕಳೆದ ಮೂರು ವಾರಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ರಾಜ್ಯಾಡಳಿತವು ಈ ಪ್ರದೇಶದ ಜನರ ಬೇಡಿಕೆಗಳನ್ನು ಕಡೆಗಣಿಸಿದ್ದು, ಇಲ್ಲಿನ ಪ್ರತಿಭಟನಾ ನಿರತ ದಲಿತ ನಿವಾಸಿಗಳು ಬೌದ್ಧ ಧರ್ಮಕ್ಕೆ ಪರಿವರ್ತನೆಗೊಂಡಿರುವುದಾಗಿ ಹೇಳಿದ್ದಾರೆ. ಹಲವರು ಕ್ಷೌರವನ್ನೂ ಮಾಡಿರುವುದಾಗಿ ಹೇಳಲಾಗಿದೆ.
ಇಲ್ಲಿಯ ಜನರು ಈ ಹಿಂದೆಯೇ ತಾವು ಹಿಂದು ಧರ್ಮದಿಂದ ಬೇರೆ ಧರ್ಮಕ್ಕೆ ಪರಿವರ್ತನೆಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದು, ಡಾ. ಬಿ.ಆರ್. ಅಂಬೇಡ್ಕರ್ ಅವರ ಅನುಯಾಯಿಗಳಾಗಿರುವ ಅವರು ಅಂಬೇಡ್ಕರ್ರಂತೆ ಬೌದ್ಧ ಧರ್ಮ ಸ್ವೀಕರಿಸಿದ್ದೇವೆ. ಅಧಿಕಾರಿಗಳು ತಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೂ ಪ್ರತಿಭಟನೆ ಮುಂದುವರೆಸುವುದಾಗಿ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.