ನ್ಯೂಯಾರ್ಕ್: ಅಮೆರಿಕಾದಲ್ಲಿ ನೆಲೆಸಿರುವ ಕನ್ನಡಿಗನೊಬ್ಬ ಅಲ್ಲಿನ ಜನಮಾನಸದಲ್ಲಿ ಅಚ್ಚಳಿಯದ ಸಾಧನೆಯನ್ನು ಮಾಡಿ ಅವರ ಪ್ರೀತಿಗೆ ಪಾತ್ರರಾಗಿದ್ದಾರೆ. ಅದಕ್ಕಾಗಿಯೇ ಅಲ್ಲಿನ ಜನತೆ ರಸ್ತೆಯೊಂದಕ್ಕೆ ಅವರ ಹೆಸರನ್ನೇ ಇಟ್ಟಿದ್ದಾರೆ.
ಅಮೆರಿಕಾದ ಮಿಸಿಸಿಪ್ಪಿ ಸರ್ಕಾರ ಡಾ.ಸಂಪತ್ ಶಿವಂಗಿ ಲಾನೆ ಅವರ ಹೆಸರನ್ನು ತನ್ನ ರಾಜ್ಯದ ರಸ್ತೆಯೊಂದಕ್ಕೆ ಇಟ್ಟಿದೆ. ಮಾನಸಿಕ ಅಸ್ವಸ್ಥರ ಕಲ್ಯಾಣಕ್ಕಾಗಿ ಅವರು ನೀಡಿದ ಅಪಾರ ಸೇವೆಯನ್ನು ಪರಿಗಣಿಸಿ ಈ ಗೌರವವನ್ನು ಅವರಿಗೆ ನೀಡಲಾಗಿದೆ.
ಶಿವಂಗಿ ಅವರು ಮಣಿಪಾಲದ ಕಸ್ತೂರಿ ಬಾ ಮೆಡಿಕಲ್ ಕಾಲೇಜಿನ ಹಳೆಯ ವಿದ್ಯಾರ್ಥಿ, ಅಲ್ಲಿ ವೈದ್ಯಕೀಯ ಪದವಿಯನ್ನು ಪಡೆದು ಅಮೆರಿಕಾಗೆ ತೆರಳಿದ ಅವರು ಅಲ್ಲಿ ವೈದ್ಯರಾಗಿ ವೃತ್ತಿ ಜೀವನ ಆರಂಭಿಸಿದರು. ಬಳಿಕ ಮಿಸಿಸಿಪ್ಪಿ ಆರೋಗ್ಯ ಇಲಾಖೆಯ ಅಧ್ಯಕ್ಷರಾಗಿ ಎರಡು ಬಾರಿ ಆಯ್ಕೆಯಾದರು. ಈ ಸಾಧನೆ ಮಾಡಿದ ಏಷ್ಯಾದ ಏಕೈಕ ವ್ಯಕ್ತಿ ಎಂಬ ಹೆಗ್ಗಳಿಕೆಯೂ ಅವರದ್ದು.
ಮಾನಸಿಕ ಅಸ್ವಸ್ಥೆಯನ್ನು ತೊಡೆದು ಹಾಕಲು ಇವರು ನಡೆಸುತ್ತಿರುವ ಅವಿರತ ಹೋರಾಟ, ಅವರ ಕಲ್ಯಾಣಕ್ಕಾಗಿ ಇವರು ನೀಡಿದ ಕೊಡುಗೆಯನ್ನು ಗಮನಿಸಿ ಇದೀಗ ಅವರ ಹೆಸರನ್ನು ರಸ್ತೆಗೆ ಇಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.