ನವದೆಹಲಿ: ನರೇಂದ್ರ ಮೋದಿ ಸರ್ಕಾರ ಸ್ವಾತಂತ್ರ್ಯ ಸೇನಾನಿ ಸುಭಾಷ್ ಚಂದ್ರ ಬೋಸ್ ಅವರಿಗೆ ಸಂಬಂಧಿಸಿದ 100 ರಹಸ್ಯ ದಾಖಲೆಗಳನ್ನು ಬಿಡುಗಡೆ ಮಾಡಿದ ತಿಂಗಳ ಬಳಿಕ ಇದೀಗ ಜಪಾನ್ ಸರ್ಕಾರವೂ ಅವರಿಗೆ ಸಂಬಂಧಿಸಿದ ದಾಖಲೆಗಳ ಬಿಡುಗಡೆಗೆ ಮುಂದಾಗಿದೆ.
ಈ ಬಗ್ಗೆ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜ್ಜು ಅವರು ಮಂಗಳವಾರ ಲೋಕಸಭೆಗೆ ಮಾಹಿತಿ ನೀಡಿದ್ದು, ಒಟ್ಟು ಐದು ದಾಖಲೆಗಳನ್ನು ಬಿಡುಗಡೆ ಮಾಡಲು ಜಪಾನ್ ನಿರ್ಧರಿಸಿದ್ದು, ಅದರಲ್ಲಿ ಎರಡು ದಾಖಲೆಗಳನ್ನು ಈ ವರ್ಷದ ಅಂತ್ಯದೊಳಗೆ ಬಹಿರಂಗಗೊಳಿಸಲಿದೆ ಎಂದಿದ್ದಾರೆ.
ಜ.23ರ ನೇತಾಜೀ ಹುಟ್ಟು ಹಬ್ಬದ ಬಳಿಕ ಮೋದಿ ಸರ್ಕಾರ ಅವರಿಗೆ ಸಂಬಂಧಿಸಿದ ಸುಮಾರು 100 ದಾಖಲೆಗಳನ್ನು ಬಿಡುಗಡೆ ಮಾಡಿದೆ. ಆದರೆ ಇವು ಅವರ ಸಾವಿನ ರಹಸ್ಯವನ್ನು ಭೇದಿಸುವಲ್ಲಿ ವಿಫಲವಾಗಿವೆ. ಇದೀಗ ಜಪಾನ್ ಬಿಡುಗಡೆ ಮಾಡಲು ನಿರ್ಧರಿಸಿರುವ ದಾಖಲೆಗಳಾದರೂ ರಹಸ್ಯವನ್ನು ಬಹಿರಂಗಪಡಿಸಲಿದೆಯೆ ಎಂಬುದನ್ನು ಕಾದು ನೋಡಬೇಕು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.