ಬೆಳ್ತಂಗಡಿ : ರಾಜ್ಯದ ಎಲ್ಲಾ ದೇವಸ್ಥಾನಗಳ ಅಭಿವೃದ್ಧಿಯ ಬಗ್ಗೆ ಚಿಂತನೆ ನಡೆಸಲು ರಾಜ್ಯ ಧಾರ್ಮಿಕ ಪರಿಷತ್ನ ಸಭೆ ಮೇ. 2 ರಂದು ಬೆಂಗಳೂರಿನಲ್ಲಿ ನಡೆಯಲಿದೆ ಎಂದು ರಾಜ್ಯ ಮುಜುರಾಯಿ ಇಲಾಖಾ ಸಚಿವ ಮನೋಹರ ತಹಸೀಲ್ದಾರ್ ಪ್ರಕಟಿಸಿದರು.
ಅವರು ಶುಕ್ರವಾರ ಧರ್ಮಸ್ಥಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ರಾಜ್ಯದ ಹೆಚ್ಚು ಆದಾಯ ಬರು ಸುಬ್ರಹ್ಮಣ್ಯ ಕ್ಷೇತ್ರದ ಅಭಿವೃದ್ಧಿಗೆ ರೂ.180 ಕೋಟಿಯ ಮಾಸ್ಟರ್ ಪ್ಲಾನ್ ತಯಾರಿಸಲಾಗಿದೆ.ಈಗಾಗಲೇ ರೂ. 50 ಕೋಟಿ ಬಿಡುಗಡೆಯಾಗಿದೆ. ರಾಜ್ಯದಲ್ಲಿ ಅತಿ ಹೆಚ್ಚು ಆದಾಯತರುವ ದೇವಸ್ಥಾನಗಳಿಗೆ ಆಗಮಿಸುವ ಭಕ್ತರಿಗೆ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸರಕಾರ ಸಿದ್ದವಾಗಿದೆ. ಈ ನಿಟ್ಟಿನಲ್ಲಿ ವಿಶೇಷ ಪ್ರಯತ್ನಗಳು ನಡೆಯುತಿವೆ. ರಾಜ್ಯದ ಸಿ ಗ್ರೇಡ್ ದೇವಸ್ಥಾನಗಳ ಅಭಿವೃದ್ದಿಗೆ ರೂ. 50 ಕೋಟಿ ಅನುದಾನವನ್ನು ಬಜೆಟ್ ಮೂಲಕ ಒದಗಿಲಾಗಿದ್ದು ಧಾರ್ಮಿಕ ಕೇಂದ್ರಗಳ ಅಭಿವೃದ್ದಿಗೆ ರಾಜ್ಯ ಸರಕಾರ ಸದಾ ಬದ್ಧ ಎಂದರು.
ಸುಬ್ರಹ್ಮಣ್ಯ ಕ್ಷೇತ್ರದಲ್ಲಿನ ನೀರಿನ ಸಮಸ್ಯೆಯ ಪರಿಹಾರಕ್ಕೆ ತಾಂಬೂಲ ಪ್ರಶ್ನೆ ಇಡಲಾಗಿದೆ. ಕ್ಷೇತ್ರಕ್ಕೆ ಇತರ ಕಡೆಯಿಂದ ನೀರನ್ನು ತಂದು ಕ್ಷೇತ್ರದಲ್ಲಿ ಉಪಯೋಗಿಸಿಕೊಳ್ಳಬಹುದಾಗಿದೆ ಎಂದು ಪ್ರಶ್ನೆಯಲ್ಲಿ ಕಂಡು ಬಂದಿದೆ. ಅದರಂತೆ ನೀರು ಒದಗಿಸಲು ಅಪರ ಜಿಲ್ಲಾಧಿಕಾರಿಗಳಿಗೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದರು. ಶಾಸಕ ಕೆ. ವಸಂತ ಬಂಗೇರ ಜೊತೆಗಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.