ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಶಿಕ್ಷಣದ ಬಗ್ಗೆ ಮಾಹಿತಿಯನ್ನು ನೀಡುವಂತೆ ಅವರ ಸಚಿವಾಲಯಕ್ಕೆ ಮಾಹಿತಿ ಹಕ್ಕು ಆಯೋಗ ಸೂಚನೆ ನೀಡಿದೆ.
ಮೋದಿಯವರ ರೋಲ್ ನಂಬರ್ ಮುಂತಾದ ಮಾಹಿತಿಯನ್ನು ಕೇಳಲಾಗಿದ್ದು, ಇದರಿಂದ ದೆಹಲಿ ಹಾಗೂ ಗುಜರಾತ್ ವಿಶ್ವವಿದ್ಯಾನಿಲಯಗಳು ಅವರ ಶಿಕ್ಷಣ ಅರ್ಹತೆಯನ್ನು ಹುಡುಕಾಡಲು ಸಹಾಯವಾಗುತ್ತದೆ.
ಪಿಎಂ ಅವರ ಪದವಿ ಶಿಕ್ಷಣದ ಮಾಹಿತಿ ಕೋರಿ ಬಂದಿದ್ದ ಅರ್ಜಿಗೆ ಉತ್ತರಿಸಲು ನಿರಾಕರಿಸಲಾಗಿತ್ತು, ಆದರೀಗ ಮಾಹಿತಿ ಆಯೋಗ ಅದಕ್ಕೆ ಉತ್ತರ ನೀಡುವಂತೆ ದೆಹಲಿ ವಿಶ್ವವಿದ್ಯಾಲಯಕ್ಕೆ ತಿಳಿಸಿದೆ.
ಚುನಾವಣೆ ಸಂದರ್ಭದಲ್ಲಿ ಮೋದಿ ತಾನು ಪದವಿ ಹಾಗೂ ಸ್ನಾತಕೋತರ ಪದವಿ ಪಡೆದಿರುವುದಾಗಿ ಘೋಷಿಸಿದ್ದರು.
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರೂ ಮೋದಿ ಶಿಕ್ಷಣದ ಮಾಹಿತಿಯನ್ನು ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.