ನವದೆಹಲಿ: ಹೆಚ್ಚಿನ ರಾಜಕೀಯ ಪಂಡಿತರು ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆ ಕುಗ್ಗುತ್ತಿದೆ ಎಂದೇ ಅಭಿಪ್ರಾಯಪಡುತ್ತಿದ್ದಾರೆ. ಆದರೆ ಶೇ.70 ರಷ್ಟು ಜನ ಈಗಲೂ ಮೋದಿ ಮತ್ತೊಂದು ಅವಧಿಗೆ ಅಧಿಕಾರಕ್ಕೇರಲಿ ಎಂಬ ಆಶಯ ಹೊಂದಿದ್ದಾರೆ ಎಂಬುದನ್ನು ನೂತನ ಸಮೀಕ್ಷೆಯೊಂದು ತಿಳಿಸಿದೆ.
ಸೆಂಟರ್ ಫಾರ್ ಮೀಡಿಯಾ ಸ್ಟಡಿಸ್ ಎಂಬ ಸಂಸ್ಥೆ ಸಮೀಕ್ಷೆಯನ್ನು ಕೈಗೊಂಡಿದ್ದು, ಶೇ.70 ರಷ್ಟು ಜನ ಮೋದಿ 2024 ರವರೆಗೆ ಪ್ರಧಾನಿಯಾಗಿರಲಿ ಎಂದು ಬಯಸಿದ್ದಾರೆ, ಶೇ.62 ರಷ್ಟು ಜನ ಮೋದಿಯ ಪ್ರದರ್ಶನದ ಬಗ್ಗೆ ತೃಪ್ತಿಯನ್ನು ವ್ಯಕ್ತಪಡಿಸಿದ್ದಾರೆ.
ಶೇ.50 ರಷ್ಟು ಜನ ಮೋದಿ ಪ್ರಧಾನಿಯಾದ ಬಳಿಕವೂ ಯಾವುದೇ ಬದಲಾವಣೆಗಳು ಆಗಿಲ್ಲ ಎಂದು ಹೇಳಿದ್ದಾರೆ. ಶೇ. 15 ರಷ್ಟು ಜನ ಪರಿಸ್ಥಿತಿ ಮೊದಲಿಗಿಂತಲೂ ಬಿಗಡಾಯಿಸಿದೆ ಎಂದು ಹೇಳಿದ್ದಾರೆ. ಶೇ.43 ರಷ್ಟು ಜನ ಮೋದಿ ಆಡಳಿತದಲ್ಲಿ ಯೋಜನೆಗಳ, ನಿಯಮಗಳ ಫಲಗಳು ಅರ್ಹರಿಗೆ ತಲುಪಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.
15 ರಾಜ್ಯಗಳ ಗ್ರಾಮೀಣ, ನಗರದ ಒಟ್ಟು 4 ಸಾವಿರ ಜನರನ್ನು ಸಮೀಕ್ಷೆಗೊಳಪಡಿಸಲಾಗಿದೆ.
ಮೋದಿ ಸಚಿವರ ಕಾರ್ಯವೈಖರಿಯ ಬಗ್ಗೆ ಪ್ರಶ್ನಿಸಿದಾಗ, ಹೆಚ್ಚಿನವರು ಸುಷ್ಮಾ ಸ್ವರಾಜ್, ರಾಜನಾಥ್ ಸಿಂಗ್, ಸುರೇಶ್ ಪ್ರಭು, ಮನೋಹರ್ ಪರಿಕ್ಕರ್, ಅರುಣ್ ಜೇಟ್ಲಿ ಅವರ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಆದರೆ ರಾಮ್ ವಿಲಸ್ ಪಾಸ್ವಾನ್, ಬಂಡಾರು ದತ್ತಾತ್ರೇಯ, ಜೆಪಿ ನಡ್ಡಾ, ಪ್ರಕಾಶ್ ಜಾವ್ಡೇಕರ್, ರಾಧ ಮೋಹನ್ ಸಿಂಗ್ ಅವರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.