ನವದೆಹಲಿ: ಭಾರತದ ಒಟ್ಟು ಜನಸಂಖ್ಯೆಯ ಶೇ.1ರಷ್ಟು ಮಂದಿ ಮಾತ್ರ ತೆರಿಗೆ ಪಾವತಿ ಮಾಡುತ್ತಿದ್ದಾರೆ, 5 ಸಾವಿರದಷ್ಟು ಮಂದಿ 1 ಕೋಟಿಗಿಂತಲೂ ಹೆಚ್ಚು ತೆರಿಗೆಯನ್ನು ಪಾವತಿ ಮಾಡಿದ್ದಾರೆ ಎಂದು ನೂತನ ವರದಿ ತಿಳಿಸಿದೆ.
ಪಾರದರ್ಶಕತೆಯನ್ನು ಕಾಪಾಡುವ ನಿಟ್ಟಿನಲ್ಲಿ ಕಳೆದ 15 ವರ್ಷಗಳ ನೇರ ತೆರಿಗೆ ದಾಖಲೆಯನ್ನು ಸರ್ಕಾರ ಸಾರ್ವಜನಿಕಗೊಳಿಸಿದೆ. 2012-13ರ ಸಾಲಿಗೆ ಮಾತ್ರ ವ್ಯಕ್ತಿಗಳ ವೈಯಕ್ತಿಕ ದಾಖಲೆಯನ್ನು ಬಹಿರಂಗಪಡಿಸಿದೆ.
2012-13ರ ಸಾಲಿನಲ್ಲಿ 2.87 ಕೋಟಿ ಜನ ಇನ್ಕಂ ಟ್ಯಾಕ್ಸ್ ರಿಟರ್ನ್ಸ್ ಸಲ್ಲಿಕೆ ಮಾಡಿದ್ದಾರೆ. ಆದರೆ ಇದರಲ್ಲಿ 1.62 ಕೋಟಿ ಮಂದಿ ಯಾವುದೇ ತೆರಿಗೆ ಪಾವತಿಸಿಲ್ಲ. ಹೀಗಾಗಿ ತೆರಿಗೆ ಪಾವತಿದಾರರ ಸಂಖ್ಯೆ 1.25 ಕೋಟಿ ಮಾತ್ರ. ಇದು ದೇಶದ ಶೇ.1ರಷ್ಟು ಜನಸಂಖ್ಯೆಯಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.