ನವದೆಹಲಿ: ಉತ್ತರಾಖಂಡದಲ್ಲಿ ಸಂಭವಿಸಿದ ಭಾರೀ ಪ್ರಮಾಣದ ಕಾಡ್ಗಿಚ್ಚಿನ ಹಿಂದೆ ಟಿಂಬರ್ ಮಾಫಿಯಾದ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ.
ಸದ್ಯಕ್ಕೆ ಕಾಡ್ಗಿಚ್ಚಿನ ಅಬ್ಬರ ತುಸು ನಿಯಂತ್ರಣಕ್ಕೆ ಬಂದಿದ್ದು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಸೇರಿದಂತೆ ವಿವಿಧ ದಳಗಳ ಸುಮಾರು 6 ಸಾವಿರ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
ಟಿಂಬರ್ ಮಾಫಿಯಾ ಮತ್ತು ಮರಗಳನ್ನು ಹರಾಜಿನ ಮೂಲಕ ಮಾರಾಟ ಮಾಡಲು ಪರವಾನಗಿ ಹೊಂದಿರುವ ಅರಣ್ಯ ಅಭಿವೃದ್ಧಿ ಇಲಾಖೆ ಪರಸ್ಪರ ಕೈಜೋಡಿಸಿ ಕಾಡ್ಗಿಚ್ಚು ಹರಡಲು ಬಿಟ್ಟಿವೆ. ಸುಟ್ಟ ಮರಗಳು ಟಿಂಬರ್ ಮಾಫಿಯಾಗೆ ಹೆಚ್ಚಿನ ಆದಾಯವನ್ನು ಒದಗಿಸುತ್ತದೆ ಎಂಬ ಸ್ಫೋಟಕ ಮಾಹಿತಿಯನ್ನು ಮಾಧ್ಯಮಗಳು ಬಿತ್ತರಿಸಿವೆ.
ಟಿಂಬರ್ ಮಾಫಿಯಾದ ಕೈವಾಡದ ಶಂಕೆಯ ಬಗ್ಗೆ ತನಿಖೆ ನಡೆಸುವುದಾಗಿ ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವ್ಡೇಕರ್ ಅವರು ಸ್ಪಷ್ಟಪಡಿಸಿದ್ದಾರೆ
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.