ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನಿಯೋಗ ಮೇ.7ರಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಬರ ಪರಿಹಾರಕ್ಕಾಗಿ 1 ಸಾವಿರ ಕೋಟಿ ರೂಪಾಯಿ ಅನುದಾನವನ್ನು ರಾಜ್ಯಕ್ಕೆ ಬಿಡುಗಡೆ ಮಾಡುವಂತೆ ಒತ್ತಾಯಿಸಲಿದೆ.
ರಾಜ್ಯದ ಎಲ್ಲಾ ಜಿಲ್ಲೆಗಳ ಬರ ಪರಿಸ್ಥಿತಿಯ ಅವಲೋಕನ ನಡೆಸಿರುವ ಸಚಿವ ಸಂಪುಟದ ನಾಲ್ಕು ಉಪಸಮಿತಿಗಳು ತಮ್ಮ ವರದಿಯನ್ನು ಕೇಂದ್ರಕ್ಕೆ ಕಳುಹಿಸಿಕೊಟ್ಟಿವೆ.
ಕರ್ನಾಟಕದ 5 ಸಾವಿರಕ್ಕೂ ಅಧಿಕ ಹಳ್ಳಿಗಳಲ್ಲಿ ಕುಡಿಯುವ ನೀರಿನ ಅಭಾವವಿದೆ, ಟ್ಯಾಂಕರ್ಗಳಲ್ಲಿ ನೀರನ್ನು ಸರಬರಾಜು ಮಾಡಲಾಗುತ್ತಿದೆ. ಹೀಗಾಗಿ ಬರ ಪರಿಹಾರ ಕಾರ್ಯ ಸಮರ್ಪಕವಾಗಿ ನಡೆಯಲು ಕೇಂದ್ರದ ನೆರವು ಅಗತ್ಯವಿದೆ ಎಂದು ಸಿಎಂ ಹೇಳಿದ್ದಾರೆ.
ಮೊದಲ ಕಂತಿನಲ್ಲಿ ಸರ್ಕಾರ ರಾಜ್ಯಕ್ಕೆ 1,540 ಕೋಟಿಯನ್ನು ನೀಡಿದೆ, ಇದು ಸಾಕಾಗುವುದಿಲ್ಲ, ರಾಜ್ಯ ಬರದಿಂದ ತೀರಾ ಸಂಕಷ್ಟಕ್ಕೆ ಒಳಗಾಗಿದ್ದು ಇನ್ನಷ್ಟು ಹಣದ ಅಗತ್ಯವಿದೆ ಎಂದು ಪ್ರಧಾನಿಗೆ ನಿಯೋಗ ವಿವರಿಸಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.