ನವದೆಹಲಿ: ಮಾಜಿ ಪ್ರಧಾನಿ ಜವಹಾರ್ ಲಾಲ್ ನೆಹರೂ ಅವರಿಗೆ ನೀಡಿರುವ ಭಾರತ ರತ್ನ ಪ್ರಶಸ್ತಿಯನ್ನು ವಾಪಾಸ್ ಪಡೆದುಕೊಳ್ಳಬೇಕು ಎಂದು ಸ್ವಾತಂತ್ರ್ಯ ಹೋರಾಟಗಾರ ಸುಭಾಷ್ ಚಂದ್ರ ಬೋಸ್ ಅವರ ಮೊಮ್ಮಗ ಚಂದ್ರ ಬೋಸ್ ಆಗ್ರಹಿಸಿದ್ದಾರೆ.
ಬೋಸ್ ಕುಟುಂಬದ ಮೇಲೆ ನೆಹರೂ ಬೇಹುಗಾರಿಕೆ ನಡೆಸಿದ್ದಾರೆ ಎಂಬ ಆರೋಪದ ಹಿನ್ನಲೆಯಲ್ಲಿ ಅವರು ಈ ಆಗ್ರಹ ಮಾಡಿದ್ದಾರೆ.
‘ಬೋಸ್ ಅವರ ವ್ಯಕ್ತಿತ್ವವನ್ನು ಹರಣ ಮಾಡುವ ಪ್ರಯತ್ನಗಳು ನಡೆಯುತ್ತಿವೆ. ಇತಿಹಾಸಕಾರರು ಅಭಿಪ್ರಾಯಗಳನ್ನು ಹೊಂದಬಹುದು, ಆದರೆ ಇತಿಹಾಸವನ್ನು ತಿರುಚುವುದು ಸರಿಯಲ್ಲ’ ಎಂದು ಚಂದ್ರ ಬೋಸ್ ಅಭಿಪ್ರಾಯಪಟ್ಟಿದ್ದಾರೆ.
‘ನೆಹರೂ ಅವರ ವ್ಯಕ್ತಿತ್ವ ಈಗ ಸಾರ್ವಜನಿಕವಾಗಿ ಹೊರಬಂದಿದೆ. ಅವರ ಭಾರತ ರತ್ನವನ್ನು ಕೂಡಲೇ ವಾಪಾಸ್ ಪಡೆಯಬೇಕು’ ಎಂದು ಅವರು ಆಗ್ರಹಿಸಿದ್ದಾರೆ.
ನೇತಾಜೀ ಬಗೆಗಿನ ರಹಸ್ಯ ಕಡತಗಳನ್ನು ಹೊರ ತರಬೇಕು ಎಂಬ ಒತ್ತಾಯ ನೇತಾಜೀ ಕುಟುಂಬ ಸದಸ್ಯರದ್ದಾಗಿದೆ. ಮೇ.17ರಂದು ತನ್ನನ್ನು ಭೇಟಿಯಾಗುವಂತೆ ಇವರಿಗೆ ಪ್ರಧಾನಿ ನರೇಂದ್ರ ಮೋದಿ ಆಹ್ವಾನ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.