ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಬುಧವಾರ ಬೆಳಿಗ್ಗೆ ಹಿರಿಯ ಸಚಿವರುಗಳಾದ ಮನೋಹರ್ ಪರಿಕ್ಕರ್, ರಾಜನಾಥ್ ಸಿಂಗ್ ಮತ್ತು ವೆಂಕಯ್ಯ ನಾಯ್ಡು ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ರಾಜ್ಯಸಭೆಯಲ್ಲಿ ಇಂದು ಅಗಸ್ಟಾವೆಸ್ಟ್ ಲ್ಯಾಂಡ್ ಹಗರಣದ ಬಗ್ಗೆ ಚರ್ಚೆ ನಡೆಯಲಿದ್ದು, ರಕ್ಷಣಾ ಸಚಿವ ಪರಿಕ್ಕರ್ ಅವರು ಈ ಬಗ್ಗೆ ಮಾತನಾಡಲಿದ್ದಾರೆ. ಕೆಲವೊಂದು ವಿಷಯಗಳನ್ನು ಅವರು ಈ ವೇಳೆ ಬಹಿರಂಗಪಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಈ ಹಿನ್ನಲೆಯಲ್ಲಿ ಮೋದಿ ಹಿರಿಯ ಸಚಿವರುಗಳೊಂದಿಗೆ ಬೆಳಿಗ್ಗೆ ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಅಗಸ್ಟಾವೆಸ್ಟ್ ಲ್ಯಾಂಡ್ ಹಗರಣದಲ್ಲಿ ತನ್ನನ್ನು ಟಾರ್ಗೆಟ್ ಮಾಡುತ್ತಿರುವ ಬಿಜೆಪಿಯನ್ನು ಸಮರ್ಥವಾಗಿ ಎದುರಿಸಲು ಕಾಂಗ್ರೆಸ್ ಕೂಡ ಸಿದ್ಧತೆಗಳನ್ನು ಮಾಡಿಕೊಂಡು ಬಂದಿದೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.