ನವದೆಹಲಿ: ಅಗಸ್ಟಾವೆಸ್ಟ್ ಲ್ಯಾಂಡ್ ಹಗರಣದ ಆರೋಪ ಎದುರಿಸುತ್ತಿರುವ ಕಾಂಗ್ರೆಸ್ ಶುಕ್ರವಾರ ರಾಷ್ಟ್ರ ರಾಜಧಾನಿಯಲ್ಲಿ ’ಪ್ರಜಾಪ್ರಭುತ್ವವನ್ನು ರಕ್ಷಿಸಿ’ ಎಂಬ ಸಮಾವೇಶವನ್ನು ನಡೆಸಲಿದೆ.
ಸಮಾವೇಶದ ನೇತೃತ್ವವನ್ನು ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಉಪಾಧ್ಯಕ್ಷ ರಾಹುಲ್ ಗಾಂಧಿ ವಹಿಸಿಕೊಳ್ಳುತ್ತಿದ್ದಾರೆ. ಮಾಝಿ ಪ್ರಧಾನಿ ಮನಮೋಹನ್ ಸಿಂಗ್ ಸೇರಿದಂತೆ ಕಾಂಗ್ರೆಸ್ನ ಹಲವಾರು ಹಿರಿಯ ನಾಯಕರು, ಸದಸ್ಯರು ಇದರಲ್ಲಿ ಭಾಗವಹಿಸಲಿದ್ದಾರೆ.
ಉತ್ತರಾಖಂಡ, ಅರುಣಾಚಲ ಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತವನ್ನು ಹೇರಿದ್ದನ್ನು ವಿರೋಧಿಸಿ, ಅಲ್ಲದೇ ಅಗಸ್ಟಾವೆಸ್ಟ್ ಲ್ಯಾಂಡ್ನಲ್ಲಿ ಕಾಂಗ್ರೆಸ್ ವಿರುದ್ಧ ಆಡಳಿತ ಪಕ್ಷ ಬಿಜೆಪಿ ಮಾಡುತ್ತಿರುವ ಆರೋಪವನ್ನು ವಿರೋಧಿಸಿ ಈ ಸಮಾವೇಶ ನಡೆಯುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.