ತಿರುವನಂತಪುರಂ : ಕೇರಳದ ದಲಿತ ವಿದ್ಯಾರ್ಥಿನಿ ಜಿಶಾ ಮೇಲೆ ಅತ್ಯಾಚಾರವೆಸಗಿ ಹತ್ಯೆಗೈಯಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ 12 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾನೂನು ಪದವಿ ವ್ಯಾಸಂಗ ಮಾಡುತ್ತಿದ್ದ ದಲಿತ ವಿದ್ಯಾರ್ಥಿನಿ ಜಿಶಾಳನ್ನು ಅತ್ಯಾಚಾರವೆಸಗಿ ಬರ್ಬರವಾಗಿ ಹತ್ಯೆಗೈಯಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಶಾಳ ಮನೆಯ ನೆರೆಮನೆಯ ವ್ಯಕ್ತಿ ಸೇರಿದಂತೆ 12 ಮಂದಿಯನ್ನು ಬಂಧಿಸಲಾಗಿದೆ. 30 ಸದಸ್ಯರನ್ನೊಳಗೊಂಡ ತನಿಖಾ ತಂಡವನ್ನು ರಚಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದರ ತನಿಖೆಯನ್ನು ಸಿಬಿಐಗೆ ವಹಿಸಲು ಕೇಂದ್ರ ಸಿದ್ಧವಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.