ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ಕ್ರಿಕೆಟಿಗ ವಿರಾಟ್ ಕೊಹ್ಲಿ ದೇಶದ ಅತೀ ಜನಪ್ರಿಯ ವ್ಯಕ್ತಿಗಳಾಗಿದ್ದಾರೆ. ಪ್ರಧಾನಿ ಮೋದಿ ಭಾರತೀಯರ ಅತ್ಯಂತ ಪ್ರೀತಿಯ ರಾಜಕಾರಣಿ ಎಂದು ಪರಿಗಣಿಸಲಾಗಿದ್ದರೆ, ಮತ್ತೊಂದೆಡೆ ವಿರಾಟ್ ಕೊಹ್ಲಿ ಅವರ ಅಭಿಮಾನಿಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಕ್ರಿಕೆಟ್ ಜಗತ್ತಿನ ಅತ್ಯಂತ ಪ್ರಸಿದ್ಧ ಆಟಗಾರ ಎನಿಸಿಕೊಂಡಿದ್ದಾರೆ.
ಮೋದಿ ಹಾಗೂ ಕೊಹ್ಲಿ ಸಾರ್ವಜನಿಕ ಸಮಾರಂಭಗಳಲ್ಲಿ ಭೇಟಿ ಆಗದಿದ್ದರೂ ಟ್ವಿಟರ್ ಮೂಲಕ ಹಲವು ಬಾರಿ ಪರಸ್ಪರ ಶುಭಾಶಯಗಳನ್ನು ಕೋರಿದ್ದಾರೆ.
ಖಾಸಗಿ ಚ್ಯಾನೆಲ್ ಒಂದರ ಸಂದರ್ಶನದ ವೇಳೆ ಮೋದಿ ಕುರಿತು ಒಂದೇ ಶಬ್ದದಲ್ಲಿ ವ್ಯಾಖ್ಯಾನಿಸಿ ಎಂಬ ಪ್ರಶ್ನೆಗೆ ಕೊಹ್ಲಿ ’ಆತ್ಮ ನಂಬಿಕೆ’ ನನ್ನ ಮನಸಿಗೆ ಬಂದ ಮೊದಲ ಶಬ್ದ ಎಂದು ಹೇಳಿದ್ದಾರೆ. ಅಲ್ಲದೇ ತನ್ನ ಸಾಮರ್ಥ್ಯದ ಬಗ್ಗೆ ಅಪಾರ ನಂಬಿಕೆ ಇದ್ದು, ಇದು ತನ್ನ ಯಶಸ್ಸಿಗೆ ಕಾರಣವಾಗಿದೆ ಎಂದು ಕೊಹ್ಲಿ ಈ ಸಂದರ್ಭದಲ್ಲಿ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.