ಕಠ್ಮಂಡು: ಅಸಹಕಾರ ಮತ್ತು ಸರ್ಕಾರಿ ವಿರೋಧಿ ಚಟುವಟಿಕೆಗಳಲ್ಲಿ ಭಾಗವಹಿಸುತ್ತಿದ್ದಾರೆ ಎಂಬ ಆರೋಪದ ಮೇರೆಗೆ ನೇಪಾಳ ಭಾರತದಲ್ಲಿನ ತನ್ನ ರಾಯಭಾರಿಯನ್ನು ಹಿಂದಕ್ಕೆ ಕರೆಸಿಕೊಂಡಿದೆ.
ರಾಷ್ಟ್ರಪತಿ ಬಿದ್ಯಾ ದೇವಿ ಭಂಡಾರಿ ಅವರ ಭಾರತ ಪ್ರವಾಸವನ್ನು ರದ್ದುಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಭಾರಿ ದೀಪ್ ಕುಮಾರ್ ಉಪಾಧ್ಯಾಯ ಮತ್ತು ಕೆಪಿ ಶರ್ಮಾ ಓಲಿ ಸರ್ಕಾರದ ನಡುವೆ ಭಿನ್ನಾಭಿಪ್ರಾಯ ತಲೆದೋರಿತ್ತು.
ಇದೀಗ ನೇಪಾಳ ಸಚಿವ ಸಂಪುಟದಲ್ಲಿ ಉಪಾಧ್ಯಾಯ ಅವರನ್ನು ವಾಪಾಸ್ ಕರೆಸಿಕೊಳ್ಳುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ.
ಬಿದ್ಯಾ ದೇವಿ ಭಂಡಾರಿ ಅವರು ಮೇ 9 ರಂದು ಭಾರತಕ್ಕೆ ಆಗಮಿಸುವವರು ಇದ್ದರು, ಉಜೈನಿಯ ಸಿಂಹಸ್ಥ ಕುಂಭಮೇಳದಲ್ಲೂ ಪಾಲ್ಗೊಳ್ಳುವವರಿದ್ದರು, ಆದರೀಗ ಭೇಟಿ ರದ್ದುಗೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.