ಕೋಲ್ಕತಾ: ಇಲ್ಲಿಯ ಜಾಧವ್ಪುರ್ ವಿಶ್ವವಿದ್ಯಾಲಯದಲ್ಲಿ ಸಿನಿಮಾ ಸ್ಕ್ರೀನಿಂಗ್ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.
ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರ ’ಬುದ್ಧ ಇನ್ ಎ ಟ್ರಾಫಿಕ್ ಜಾಮ್’ ಸಿನಿಮಾ ಸ್ಕ್ರೀನಿಂಗ್ ವಿರುದ್ಧ ಕೆಲವು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದು, ಎರಡು ಗುಂಪುಗಳ ನಡುವೆ ಘರ್ಷಣೆ ಸಂಭವಿಸಿದೆ. ಘರ್ಷಣೆಯಲ್ಲಿ ಹಲವರಿಗೆ ಸಣ್ಣ-ಪುಟ್ಟ ಗಾಯ ಉಂಟಾಗಿದೆ.
ಸಿನಿಮಾದಲ್ಲಿ ಕೆಲವು ಒಡಕು ಉಂಟು ಮಾಡುವ ದೃಷ್ಯಗಳಿದ್ದು, ಇದನ್ನು ವಿರೋಧಿಸಿ ಪ್ರತಿಭಟನೆ ನಡೆಸಿರಿವುದಾಗಿ ವಿದ್ಯಾರ್ಥಿಗಳು ತಿಳಿಸಿದ್ದಾರೆ.
ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಅಗ್ನಿಹೋತ್ರಿ ವಿರುದ್ಧ ಘೋಷಣೆಗಳನ್ನು ಕೂಗಿದ್ದರಲ್ಲದೇ ಕಾಲೇಜು ಆವರಣದಿಂದ ಹೊರನಡೆಯುವಂತೆ ಫಲಕಗಳು ಮತ್ತು ಕಪ್ಪು ಧ್ವಜವನ್ನು ತೋರಿಸಿದ್ದಾರೆ. ಈ ಸಂದರ್ಭ ಅಗ್ನಿಹೋತ್ರಿ ಅವರ ಕಾರಿನ ಗಾಜುಗಳಿಗೆ ಹಾನಿ ಉಂಟಾಗಿದೆ.
ಪ್ರತಿಭಟನೆ ವೇಳೆ ಹೊರಗಿನಿಂದ ಬಂದ ಕೆಲವು ಮಂದಿ ಕಾಲೇಜು ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಿದ್ದಾರೆ. ಕಾಲೇಜು ವಿದ್ಯಾರ್ಥಿಗಳು ನಾಲ್ವರನ್ನು ಹಿಡಿದು ಕಾಲೇಜು ಉಪಕುಲಪತಿಗಳಿಗೆ ಒಪ್ಪಿಸಿದ್ದಾರೆ. ಬಳಿಕ ಈ ನಾಲ್ವರನ್ನು ಪೊಲೀಸರಿಗೆ ಒಪ್ಪಿಸಲಾಗಿದ್ದು, ಇವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.