ಹೊಸೂರು : ಅಗಸ್ಟಾ ವೆಸ್ಟ್ಲ್ಯಾಂಡ್ಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರು ಹಗರಣದ ತಪ್ಪಿತಸ್ಥರನ್ನು ಸುಮ್ಮನೆ ಬಿಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.
ಅಗಸ್ಟಾ ವೆಸ್ಟ್ಲ್ಯಾಂಡ್ ಬಗ್ಗೆ ಮಾತನಾಡಿರುವ ಪ್ರಧಾನಿ ಮೋದಿ, ನಾವು ಅವರನ್ನು ಅಪರಾಧಿ ಎಂದಿಲ್ಲ ಮತ್ತು ನಾನು ಎಂದೂ ಇಟಲಿಗೆ ಹೋಗಿಲ್ಲ ಅಥವಾ ಅಲ್ಲಿ ಯಾರ ಪರಿಚಯವೂ ನನಗಿಲ್ಲ. ಆದರೆ ನಮ್ಮ ದೇಶದ ಕೆಲವು ರಾಜಕಾರಣಿಗಳ ಹೆಸರು ಇಟಲಿ ಕೋರ್ಟ್ನಲ್ಲಿ ಪ್ರಸ್ತಾಪವಾಗಿದೆ.
ಇಟಲಿಯ ಮಿಲಾನ್ ಕೋರ್ಟ್ ಅವರನ್ನು ಅಪರಾಧಿಗಳು ಎಂದು ಹೇಳಿದೆ ಎಂದು ಅವರು ಹೇಳಿದ್ದಾರೆ. ಈ ಮೂಲಕ ಈ ಪ್ರಕರಣಕ್ಕೂ ನಮ್ಮ ಸರಕಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ಇತರರಿಗೆ ಟಾಂಗ್ ನೀಡಿದ್ದಾರೆ.
ಅಗಸ್ಟಾ ವೆಸ್ಟ್ಲ್ಯಾಂಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋನಿಯಾ ಗಾಂಧಿಯವರ ಹೆಸರು ಪ್ರಮುಖವಾಗಿ ಕೇಳಿಬಂದಿತ್ತು ಮತ್ತು ಅವರ ಆಪ್ತ ಅಹಮದ್ ಪಟೇಲ್ ಸೇರಿದಂತೆ ಇನ್ನೂ ಹಲವರ ಹೆಸರು ಕೇಳಿಬಂದಿದೆ. ಅಲ್ಲದೆ ಈ ಬಗ್ಗೆ ತನಿಖೆಗೆ ಕಾಂಗ್ರೆಸ್ ಸಮಯದಲ್ಲೇ ಸಿಬಿಐಗೆ ನೀಡಲಾಗಿತ್ತು. ಕಳೆದ ಎರಡು ವರ್ಷಗಳಿಂದ ತನಿಖೆ ತೀವ್ರವಾಗಿ ನಡೆಯುತ್ತಿದ್ದರೂ, ಕಾಂಗ್ರೆಸ್ ಪಕ್ಷ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ತನಿಖೆ ನಡೆಸಲು ಒತ್ತಾಯಿಸುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.