ನವದೆಹಲಿ: ವಿವಿಐಪಿ ಹೆಲಿಕಾಫ್ಟರ್ ಹಗರಣಕ್ಕೆ ಸಂಬಂಧಿಸಿದಂತೆ ಇದೀಗ ಎಎಪಿ ಹೋರಾಟಕ್ಕೆ ಇಳಿದಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಸೋನಿಯಾ ಗಾಂಧಿ ಇಬ್ಬರನ್ನೂ ಗುರಿಯಾಗಿಸಿ ಇದು ಪ್ರತಿಭಟನೆ ನಡೆಸುತ್ತಿದೆ.
ನವದೆಹಲಿಯ ರೇಸ್ಕೋಸ್ ಮೆಟ್ರೋ ಸ್ಟೇಶನ್ನಿನಲ್ಲಿ ಪ್ರತಿಭಟನೆ ನಡೆಸಿದ ಎಎಪಿ, ಸೋನಿಯಾ ವಿರುದ್ಧ ಮೋದಿ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದೆ. ಬಿಜೆಪಿಗೆ ಬಿಸಿ ಮುಟ್ಟಿಸಿ ಕಾಂಗ್ರೆಸ್ ವಿರುದ್ಧ ಕ್ರಮಕೈಗೊಳ್ಳುವಂತೆ ಮಾಡುವ ಉದ್ದೇಶ ಎಎಪಿಯದ್ದು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ಸಿಎಂ ಅರವಿಂದ್ ಕೇಜ್ರಿವಾಲ್ ಅವರು, ಬಿಜೆಪಿ ಈ ವಿಷಯದಲ್ಲಿ ಕಳೆ ೨ ವರ್ಷದಿಂದ ಮೌನವಾಗಿದೆ, ಪ್ರಧಾನಿ ಕಾಂಗ್ರೆಸ್ಗೆ ಸಹಾಯ ಮಾಡುತ್ತಿದ್ದಾರೆ. ಅವರಿಗೆ ಗಾಂಧಿಗಳ ವಿರುದ್ಧ ಕ್ರಮಕೈಗೊಳ್ಳುವ ಧೈರ್ಯ ಇಲ್ಲ ಎಂಬ ಗಂಭೀರ ಆರೋಪ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.