ಜಮ್ಮು: ಟ್ರಾಫಿಕ್ ಸಮಸ್ಯೆಯನ್ನು ನಿವಾರಿಸಲು ದೆಹಲಿಯಲ್ಲಿರುವಂತೆ ಜಮ್ಮು-ಕಾಶ್ಮೀರದಲ್ಲೂ ಸಮ- ಬೆಸ ನಿಯಮ ಜಾರಿಗೆ ತರಲು ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಚಿಂತನೆ ನಡೆಸಿದ್ದಾರೆ.
ಬಸ್ ಸೇವೆ ಮತ್ತಿತರ ಸೌಲಭ್ಯಗಳನ್ನು ಆರಂಬಿಸಲು ಮುಂದಾಗಿದ್ದು, ಜನರು ಹಾಗೂ ವಿದ್ಯಾರ್ಥಿಗಳು ಸಹಕರಿಸುವಂತೆ ಮನವಿ ಮಾಡಿದ್ದಾರೆ.
ಕಾಲೇಜು ಹಾಗೂ ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳು ಕಾರು, ದ್ವಿಚಕ್ರ ವಾಹನಗಳಲ್ಲಿ ಆಗಮಿಸುತ್ತಿದ್ದಾರೆ. ಇವುಗಳ ನಿಲುಗಡೆ ಸ್ಥಳಾವಕಾಶದ ಕೊರತೆ ಇದ್ದು ಸಮಸ್ಯೆ ಉಂಟಾಗಿದೆ. ಆದ್ದರಿಂದ ವಿದ್ಯಾರ್ಥಿಗಳು ಸಹಕರಿಸಿದಲ್ಲಿ ಟ್ರಾಫಿಕ್ ಸಮಸ್ಯೆ ನಿವಾರಿಸಲು ಸಾಧ್ಯ ಮತ್ತು ಇದು ವಿಶ್ವಕ್ಕೆ ಮಾದರಿಯಾಗಲಿದೆ ಎಂದು ಹೇಳಿದ್ದಾರೆ.
ಲಾಲ್ ಚೌಕ್ ಸುತ್ತಮುತ್ತಲಿನ ವ್ಯಾಪಾರಸ್ಥರಿಗೆ ಸಾಪ್ತಾಹಿಕ ಅಥವಾ ಮಾಸಿಕ ಪ್ಯಾಕೇಜ್ ನೀಡುವ ಮೂಲಕ ಗೊತ್ತುಪಡಿಸಿದ ಸ್ಥಳಗಳಲ್ಲೇ ವಾಹನಗಳನ್ನು ಪಾರ್ಕ್ ಮಾಡುವಂತೆ ಮನವಿ ಮಾಡಲು ಅಧಿಕಾರಿಗಳಿಗೆ ಕೋರಲಾಗಿದೆ ಎಂದು ಮೆಹಬೂಬ ಮುಫ್ತಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.