ಕನ್ಯಾಕುಮಾರಿ: ಕಾಂಗ್ರೆಸ್ ಪಕ್ಷದ ಸದಸ್ಯರು ಹಲವಾರು ಹಗರಣಗಳಲ್ಲಿ ಭಾಗಿಯಾಗಿದ್ದು, ಚಾಪರ್ ಹಗರಣದ ಮೂಲಕ ಹಣ ಗಳಿಸುವ ಉದ್ದೇಶ ಹೊಂದಿದ್ದಾರೆ. ಕಾಂಗ್ರೆಸ್ ಆಳ್ವಿಕೆಯ ಸಂದರ್ಭದಲ್ಲಿ ೨ಜಿ, ೩ಜಿ ಹಗರಣದಲ್ಲೂ ಕಾಂಗ್ರೆಸ್ ಪಕ್ಷ ತೊಡಗಿಕೊಂಡಿದ್ದು, ಬಿಜೆಪಿ ಸರ್ಕಾರ ಹಹರಣಗಳನ್ನು ತಡೆಗಟ್ಟಲು ಪ್ರಯತ್ನಿಸುತ್ತಿದೆ ಎಂದು ಮೋದಿ ಹೇಳಿದ್ದಾರೆ.
ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡುತ್ತಿದ್ದ ಅವರು, ಹೆಲಿಕಾಪ್ಟರ್ ಖರೀದಿಗೆ ಹಣ ಪಡೆಯುವಲ್ಲಿ ಕಾಂಗ್ರೆಸ್ನ ಹಿರಿಯ ನಾಯಕರು ಭಾಗಿಯಾಗಿರುವ ಕುರಿತು ಭಾರತವಲ್ಲ ಬದಲಾಗಿ ಇಟಲಿ ಕೋರ್ಟ್ ಹೇಳುತ್ತಿದೆ. ಆದರೆ ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದು ಎರಡು ವರ್ಷ ಪೂರ್ಣಗೊಳ್ಳುತ್ತಿದ್ದು, ಈವರೆಗೆ ಯಾವುದೇ ಹಗರಣದಲ್ಲಿ ಭಾಗಿಯಾಗಿರುವ ಬಗ್ಗೆ ವರದಿಯಾಗಿಲ್ಲ ಎಂದು ಮೋದಿ ಹೇಳಿದ್ದಾರೆ.
ತಮಿಳುನಾಡಿನ ಅಭಿವೃದ್ಧಿಗಾಗಿ ಬಿಜೆಪಿ ಸರ್ಕಾರ ಪ್ರಯತ್ನಿಸುತ್ತಿದ್ದು, ಇದಕ್ಕೆ ಜನರು ಸಹಕರಿಸಬೇಕಿದೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.