ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ಬಿಎ ಮತ್ತು ಎಂಎ ಪದವಿ ದಾಖಲೆಗಳನ್ನು ಬಿಜೆಪಿ ಇಂದು ಬಿಡುಗಡೆಗೊಳಿಸಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಪದವಿ ಪ್ರಮಾಣ ಪತ್ರಗಳನ್ನು ಬಹಿರಂಗ ಪಡಿಸಬೇಕೆಂದು ಆಗ್ರಹಿಸಿದ್ದ ಕೇಜ್ರಿವಾಲ್ಗೆ ಈ ಮೂಲಕ ಉತ್ತರ ನೀಡಿದಂತಾಗಿದೆ.
ನವದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಪ್ರಧಾನಿ ಮೋದಿಯವರು ದೆಹಲಿ ವಿಶ್ವವಿದ್ಯಾನಿಲಯದಿಂದ ಪಡೆದಿರುವ ಪದವಿ ಪ್ರಮಾಣ ಪತ್ರವನ್ನು ಬಿಡುಗಡೆಗೊಳಿಸಿದ್ದಾರೆ.
ಯಾರೊಬ್ಬರ ವಿರುದ್ಧ ಗಂಭೀರ ಆರೋಪ ಮಾಡುವ ಮೊದಲು ಸತ್ಯಾಸತ್ಯತೆಗಳನ್ನು ಅರಿತುಕೊಳ್ಳಬೇಕು. ಒಬ್ಬ ಪ್ರಧಾನಿಯ ಪದವಿ ಪ್ರಮಾಣ ಪತ್ರವನ್ನು ಬಿಡುಗಡೆಗೊಳಿಸುವ ದಿನ ಬರುತ್ತದೆ ಎಂದು ನಾನು ಎಂದುಕೊಂಡಿರಲಿಲ್ಲ. ಇಂತಹ ಪರಿಸ್ಥಿತಿ ಎದುರಾಗಲು ಕೇಜ್ರಿವಾಲ್ ಕಾರಣರಾಗಿದ್ದು ಅವರು ಕ್ಷಮೆ ಯಾಚಿಸಬೇಕೆಂದು ಅಮಿತ್ ಶಾ ಹಾಗೂ ಅರುಣ್ ಜೇಟ್ಲಿ ಆಗ್ರಹಿಸಿದರು.
ಆದರೆ ಎಎಪಿಯು ಈ ಪದವಿ ಪ್ರಮಾಣಪತ್ರಗಳನ್ನು ನಕಲಿ ಎಂದು ಹೇಳುತ್ತಿದ್ದು, ಮೋದಿಯವರ ಬಿಎ ಮತ್ತು ಎಂಎ ಪದವಿ ಪ್ರಮಾಣ ಪತ್ರಗಳಿಗೆ ಹೋಲಿಕೆ ಇಲ್ಲ ಎಂದು ಮತ್ತೆ ರಾಗ ಎಳೆದಿದ್ದು, ಈ ಕುರಿತು ಮೋದಿಯವರೇ ಸ್ವತಃ ಈ ಕುರಿತು ವಿವರಣೆ ನೀಡಬೇಕೆಂದು ಮತ್ತೊಮ್ಮೆ ಆಗ್ರಹಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.