ನವದೆಹಲಿ : ದೂರ ಶಿಕ್ಷಣದ ಮೂಲಕ ಸುಮಾರು 500 ಉಚಿತ ಕೋರ್ಸ್ಗಳನ್ನು ಆರಂಭಿಸಲು ಕೇಂದ್ರ ಸರ್ಕಾರ ಯೋಜನೆ ಸಿದ್ಧಪಡಿಸಿದೆ ಎನ್ನಲಾಗಿದೆ.
ಪ್ರಸಕ್ತ ವರ್ಷದಿಂದ ಸುಮಾರು 10 ಭಾಷೆಗಳಲ್ಲಿ 500 ಉಚಿತ ಕೋರ್ಸ್ಗಳನ್ನು ಆರಂಭಿಸಲು ಸರ್ಕಾರ ಚಿಂತನೆ ನಡೆಸಿದೆ. 10 ಭಾಷೆಗಳು ಯಾವ್ಯಾವುದು ಎನ್ನುವುದು ಇನ್ನಷ್ಟೇ ತಿಳಿಯಬೇಕು.
ವಿಶ್ವವಿದ್ಯಾಲಯ ಧನ ಸಹಾಯ ಆಯೋಗ (ಯುಜಿಸಿ) ಮತ್ತು ಓಪನ್ ಅಂಡ್ ಡಿಸ್ಟೆನ್ಸ್ ಲರ್ನಿಂಗ್ (ಒಡಿಎಲ್) ಸಹಯೋಗದೊಂದಿಗೆ ಕೋರ್ಸ್ಗಳನ್ನು ಆರಂಭಿಸಲು ಚಿಂತನೆ ನಡೆಸಲಾಗಿದೆ ಎಂದು ಮಾನವ ಹಕ್ಕು ಮತ್ತು ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿಯವರು ಹೇಳಿದ್ದಾರೆ.
ಓಡಿಎಲ್ ಮೂಲಕ ಮಾನವಶಾಸ್ತ್ರ, ಸಾಮಾನ್ಯ ವಿಜ್ಞಾನ, ಸಾಮಾಜಿಕ ಅಧ್ಯಯನ ವಿಷಯಗಳ ಬಗ್ಗೆ ಕೋರ್ಸ್ ಆರಂಭಿಸಲಾಗುವುದು, ಜೊತೆಗೆ ಮೊಬೈಲ್ ಆ್ಯಪ್ ಮತ್ತು ಆನ್ಲೈನ್ ಮೂಲಕವೂ ಕೋರ್ಸ್ಗಳನ್ನು ಪಡೆಯಲು ಅನುಕೂಲವಾಗುವಂತೆ ಯೋಜಿಸಲಾಗಿದೆ ಎಂದಿದ್ದಾರೆ.
ಪ್ರಸ್ತುತ ಇಂದಿರಾಗಾಂಧಿ ನ್ಯಾಷನಲ್ ಓಪನ್ ಯುನಿವರ್ಸಿಟಿ ಮತ್ತು ಸಾರ್ವಜನಿಕ ನಿಧಿಯ ರಾಜ್ಯ ಓಪನ್ ಯುನಿವರ್ಸಿಟಿಗಳಲ್ಲಿ ಒಡಿಎಲ್ ಮೂಲಕ ಕೋರ್ಸ್ ನಡೆಸಲಾಗುತ್ತಿದ್ದು, ಇವುಗಳ ವಿಶ್ವವಿದ್ಯಾನಿಲಯಗಳ ದೂರ ಶಿಕ್ಷಣ ಸಂಸ್ಥೆಗಳೂ ಡೀಮ್ಡ್ ಯುನಿವರ್ಸಿಟಿಗಳಲ್ಲಿಯೂ ಈ ಕೋರ್ಸ್ಗಳನ್ನು ನಡೆಸಲಾಗುತ್ತದೆ ಎಂದಿದ್ದಾರೆ.
ವಿವಿಧ ವಲಯಗಳಲ್ಲಿ ಕೋರ್ಸ್ಗಳ ಪಠ್ಯಕ್ರಮವನ್ನು ಪರಿಷ್ಕರಿಸುವುದಕ್ಕೆ ಸಂಬಂಧಿಸಿದಂತೆ ದೇಶಿ-ವಿದೇಶಿ ಸಂಸ್ಥೆಗಳ ಜೊತೆ ಚರ್ಚೆಗಳು ನಡೆಯುತ್ತಿವೆ. ಎನ್ಐಟಿಯ ಪಠ್ಯಕ್ರಮಕ್ಕೆ ಸಂಬಂಧಿಸಿದಂತೆ ಮೆಸಾಚ್ಯುಸೆಟ್ಸ್ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ, ಇಂಜಿನಿಯರಿಂಗ್ ಕೋರ್ಸ್ಗಳಿಗೆ ಸಂಬಂಧಿಸಿದಂತೆ ಸ್ಟಾನ್ಫರ್ಡ್ ವಿಶ್ವವಿದ್ಯಾಲಯ ಮೊದಲಾದವುಗಳ ಜತೆ ಚರ್ಚಿಸಲಾಗುತ್ತಿದೆ ಎಂದು ಸ್ಮೃತಿ ಇರಾನಿ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.