ನವದೆಹಲಿ: ಭಾರತದ ಮಹಿಳಾ ಹಾಕಿ ತಂಡದ ನಾಯಕಿ ರೀತು ರಾಣಿ ಹಾಗೂ ಪುರುಷರ ತಂಡದ ಹಿರಿಯ ಆಟಗಾರ ವಿ.ಆರ್. ರಘುನಾಥ್ ಹಾಗೂ ಧರಮ್ವೀರ್ ಅವರ ಹೆಸರನ್ನು ಹಾಕಿ ಇಂಡಿಯಾ ಅರ್ಜುನ ಪ್ರಶಸ್ತಿಗೆ ಶಿಫಾರಸು ಮಾಡಿದೆ.
ಇದರ ಜೊತೆಗೆ ಸಿಲ್ವನಸ್ ದಂಗ್ ದಂಗ್ ಅವರನ್ನು ಮೇಜರ್ ಧ್ಯಾನ್ಚಂದ್ ಜೀವನಶ್ರೇಷ್ಠ ಸಾಧನೆ ಪ್ರಶಸ್ತಿ ಹಾಗೂ ಕೋಚ್ ಸಿ.ಆರ್. ಕುಮಾರ್ ಅವರ ಹೆಸರನ್ನು ದ್ರೋಣಾಚಾರ್ಯ ಪ್ರಶಸ್ತಿಗೆ ಶಿಫಾರಸು ಮಾಡಲಾಗಿದೆ ಎಂದು ಹಾಕಿ ಇಂಡಿಯಾ ತಿಳಿಸಿದೆ.
ಈ ಆಟಗಾರರ ಕ್ರೀಡಾ ಸ್ಫೂರ್ತಿ ಹಾಗೂ ಅರ್ಪಣೆಯಿಂದಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಶಸ್ತಿಗಳನ್ನು ಪಡೆದು ಭಾರತ ಹೆಮ್ಮೆ ಪಡುವಂತಾಗಿದೆ. ಅವರ ಪ್ರಯತ್ನ ಹಾಗೂ ಗುರುತುವಿಕೆಯಿಂದ ಅವರು ಈ ಪ್ರಶಸ್ತಿಗೆ ಅರ್ಹರಾಗಿದ್ದಾರೆ ಎಂದು ಹಾಕಿ ಇಂಡಿಯಾ ಕಾರ್ಯದರ್ಶಿ ಮೊಹಮ್ಮದ್ ಮುಷ್ತಾಕ್ ಅಹ್ಮದ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.