ಬೆಂಗಳೂರು : ಎರಡನೇ ಬಾರಿಗೆ ಪ್ರಶ್ನೆ ಪತ್ರಿಕೆ ಸೋರಿಕೆಯಾದದ್ದು ಹಾನಗಲ್ನಿಂದ ಎಂದು ಆರೋಪಿ ಕಿರಣ್ ಕುಮಾರ್ ಬಾಯಿಬಿಟ್ಟಿದ್ದಾನೆ.
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ಅಲಿಯಾಸ್ ಕಿರಣ್ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದು, ವಿಚಾರಣಾ ಸಂದರ್ಭ ಈ ಮಾಹಿತಿಯನ್ನು ಬಾಯಿಬಿಟ್ಟಿದ್ದ.
ಹಾನಗಲ್ ಸಂಗ್ರಹಾಲಯದ ದ್ವಿತೀಯ ದರ್ಜೆ ಸಹಾಯಕನಾಗಿರುವ ಸಂತೋಷ್ ಎಂಬವನ ನೆರವಿನಿಂದ ಎರಡನೇ ಬಾರಿಗೆ ರಸಾಯನಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆಗೆ ಮಾಡಲಾಗಿತ್ತು ಎಂದು ಹೇಳಿದ್ದಾನೆ ಎಂದು ಸಿಐಡಿ ಡಿಜಿಪಿ ಕಿಶೋರ್ ಚಂದ್ರ ಅವರು ತಿಳಿಸಿದ್ದಾರೆ
ಇತ್ತೀಚೆಗೆ ಶಿವಕುಮಾರಯ್ಯನನ್ನು ಬಂಧಿಸಲಾಗಿತ್ತು. ಆತನ ವಿಚಾರಣೆ ಸಂದರ್ಭ ಕಿರಣ್ ಹೆಸರು ಬಾಯಿಬಿಟ್ಟಿದ್ದು, ಕಿರಣ್ ಮತ್ತು ಶಿವಕುಮಾರಯ್ಯ ಹಲವು ವರ್ಷಗಳಿಂದ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ತೊಡಗಿ ಕೊಂಡಿದ್ದರು ಎಂದು ತಿಳಿದು ಬಂದಿದೆ.
ಈ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಈಗಾಗಲೇ 14 ಜನರನ್ನು ಬಂಧಿಸಿದ್ದು ಕೋಕಾ ಕಾಯಿದೆ ಅನ್ವಯ ಪ್ರಕರಣ ದಾಖಲಿಸಲಾಗಿದೆ
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.