ನವದೆಹಲಿ; ಭಾರತದ ನಗರಗಳ ಮಾಲಿನ್ಯ ನಿಯಂತ್ರಿಸಲು ಸರ್ಕಾರ ಬಹಳಷ್ಟು ಪ್ರಯತ್ನಗಳನ್ನು ಮಾಡುತ್ತಲೇ ಇದೆ. ಆದರೆ ಫಲಿತಾಂಶ ಮಾತ್ರ ಶೂನ್ಯ. ಇದೀಗ ವಿಶ್ವದ ಅತೀ ವಾಯು ಮಾಲಿನ್ಯಕ್ಕೆ ಒಳಗಾದ 5 ನಗರಗಳ ಪೈಕಿ ಭಾರತದ 4 ನಗರಗಳು ಸೇರಿವೆ.
ವಿಶ್ವ ಆರೋಗ್ಯ ಸಂಸ್ಥೆ ಗುರುವಾರ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ಇರಾನಿನ ಝಬೋಲ್ ನಗರ, ಭಾರತದ ಗ್ವಾಲಿಯರ್, ಅಲಹಾಬಾದ್, ಪಾಟ್ನಾ, ರಾಯ್ಪುರಗಳು ಅತಿಯಾದ ವಾಯು ಮಾಲಿನ್ಯಕ್ಕೊಳಗಾಗಿದೆ.
ಆದರೆ ಹೆಚ್ಚಿನ ದೇಶಗಳು ವಾಯುಮಾಲಿನ್ಯವನ್ನು ಪರೀಕ್ಷಿಸುವ ಮಾನಿಟರಿಂಗ್ ಸಿಸ್ಟಮ್ ಅಳವಡಿಸದ ಕಾರಣ ಈ ಪಟ್ಟಿಯಲ್ಲಿ ಸೇರ್ಪಡೆಗೊಳಿಸಲಾಗಿಲ್ಲ. ಕೆಲವು ದೇಶಗಳು ತೀರಾ ಹೀನ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಭಾರತವೂ ಈ ನಿಟ್ಟಿನಲ್ಲಿ ಸವಾಲನ್ನು ಎದುರಿಸುತ್ತಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.
ಅಲ್ಲದೇ ಈ ಸಮಸ್ಯೆಯನ್ನು ಎದುರಿಸುವ ನಿಟ್ಟಿನಲ್ಲಿ ಭಾರತ ರಾಷ್ಟ್ರೀಯ ಯೋಜನೆಯನ್ನು ರಚಿಸುತ್ತಿರುವುದು ಉತ್ತಮ ಬೆಳವಣಿಗೆ, ಕೆಲವು ದೇಶಗಳು ಈ ಬಗ್ಗೆ ಏನನ್ನೂ ಚಿಂತಿಸಿಲ್ಲ ಎಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.