ನವದೆಹಲಿ: 2008ರ ಮಾಲೆಗಾಂವ್ ಸ್ಫೋಟಕ್ಕೆ ಸಂಬಂಧಿಸಿದಂತೆ ಸಾದ್ವಿ ಪ್ರಗ್ಯಾ ಸಿಂಗ್ ಠಾಕೂರ್ ಹೆಸರನ್ನು ಚಾರ್ಜ್ಶೀಟ್ನಲ್ಲಿ ಉಲ್ಲೇಖ ಮಾಡದೇ ಇರಲು ರಾಷ್ಟ್ರೀಯ ತನಿಖಾ ತಂಡ ನಿರ್ಧರಿಸಿದೆ.
ಈ ಪ್ರಕರಣದ ಚಾರ್ಜ್ಶೀಟ್ನ್ನು ಶುಕ್ರವಾರ ರಾಷ್ಟ್ರೀಯ ತನಿಖಾ ತಂಡ ಮುಂಬಯಿ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಲಿದೆ. ಇದರಲ್ಲಿ ಸಾದ್ವಿ ಹೆಸರು ಇಲ್ಲದೇ ಇರುವ ಕಾರಣ ಅವರು ಶೀಘ್ರದಲ್ಲೇ ಜೈಲಿನಿಂದ ಬಿಡುಗಡೆ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.
26/11ರ ಮುಂಬಯಿ ದಾಳಿಯಲ್ಲಿ ಮೃತರಾದ ಮಹಾರಾಷ್ಟ್ರ ಎಟಿಎಸ್ ಮುಖ್ಯಸ್ಥ ಹೇಮಂತ್ ಕರ್ಕರೆ ಅವರು ನಡೆಸಿದ ಮಾಲೆಗಾಂವ್ ಸ್ಫೋಟ ತನಿಖೆಯ ವಿವರವನ್ನು ಚಾರ್ಜ್ಶೀಟ್ನಲ್ಲಿ ಉಲ್ಲೇಖ ಮಾಡಲಾಗಿದೆ. ಪ್ರಮುಖ ಆರೋಪಿ ಕೊಲೊನಿಯಲ್ ಪ್ರಸಾದ್ ಪುರೋಹಿತ್ ಅವರ ವಿರುದ್ಧದ ಸಾಕ್ಷಿಯನ್ನೂ ಸಲ್ಲಿಕೆ ಮಾಡಲಾಗುತ್ತದೆ.
ಪ್ರಸಾದ್ ಪುರೋಹಿತ್ ಈ ಪ್ರಕರಣ ಪ್ರಮುಖ ಆರೋಪಿ ಎಂದು ಚಾರ್ಜ್ಶೀಟ್ನಲ್ಲಿ ಪರಿಗಣಿಸಲ್ಪಟ್ಟಿದ್ದಾರೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.