ಹೈದರಾಬಾದ್: ಹೈದರಾಬಾದ್ನ ದಲಿತ ಸಂಶೋಧನಾ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣದ ವಿಷಯದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯ ಇಬ್ಭಾಗವಾಗಿದೆ. ಕೆಲ ವಿದ್ಯಾರ್ಥಿಗಳು ಆತನಿಗೆ ನ್ಯಾಯ ಸಿಗಬೇಕು ಎಂದು ಹೋರಾಟವನ್ನು ನಡೆಸುತ್ತಿದ್ದರೆ, ಕೆಲ ವಿದ್ಯಾರ್ಥಿಗಳು ಶೈಕ್ಷಣಿಕ ಚಟುವಟಿಕೆಯನ್ನು ಮುಂದುವರೆಸುವಂತೆ ಒತ್ತಾಯಿಸುತ್ತಿದ್ದಾರೆ.
ಸಿಪಿಎಂನ ವಿದ್ಯಾರ್ಥಿ ಘಟಕ ಎಸ್ಎಫ್ಐನ ನಾಯಕ ರಾಜು ಕುಮಾರ್ ಸಾಹು ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿದ್ದು, ಎಸ್ಎಫ್ಐ ಅವಕಾಶವಾದಿ ರಾಜಕಾರಣ ಮಾಡುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾನೆ, ಅಲ್ಲದೇ ವೆಮುಲಾ ಚಳುವಳಿ ವಿವಿಯಲ್ಲಿ ನಡೆಯುತ್ತಿರುವ ರೀತಿಯನ್ನೇ ಪ್ರಶ್ನಿಸಿದ್ದಾನೆ.
ಈ ಚಳುವಳಿಗೆ ಕಾಂಗ್ರೆಸ್ ಮತ್ತು ಎಡಪಕ್ಷಗಳು ಅನುದಾನ ನೀಡುತ್ತಿದೆ ಎಂದು ಆರೋಪಿಸಿರುವ ಆತ, ವಿದ್ಯಾರ್ಥಿಗಳ ಶೈಕ್ಷಣಿಕ ಬದುಕು ಹಾಳಾಗುತ್ತಿದೆ. ಈ ಎಲ್ಲಾ ಘಟನೆಯಿಂದ ಸಾಮಾನ್ಯ ವಿದ್ಯಾರ್ಥಿಗಳು ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾನೆ.
ನನ್ನ ಅಧ್ಯಯನಕ್ಕೆ ತೊಡಕಾಗಬಾರದು ಎಂಬ ಕಾರಣಕ್ಕೆ ತಪ್ಪು ದಾರಿಯಿಂದ ದೂರ ಸರಿಯಲು ನಿರ್ಧರಿಸಿದ್ದೇನೆ ಎಂದಿದ್ದಾನೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.