ನವದೆಹಲಿ: ಭಾರತೀಯ ದಂಡ ಸಂಹಿತೆಯ ಅಡಿಯಲ್ಲಿ ಮಾನನಷ್ಟ ಪ್ರಕರಣ ಕ್ರಿಮಿನಲ್ ಅಪರಾಧದ ವ್ಯಾಪ್ತಿಗೆ ಒಳಪಡುತ್ತದೆ, ಇದು ಸಿವಿಲ್ ಅಪರಾಧವಲ್ಲ ಎಂದು ಸುಪ್ರೀಂಕೋರ್ಟ್ ಶುಕ್ರವಾರ ಮಹತ್ವದ ತೀರ್ಪು ನೀಡಿದೆ.
ಸುಬ್ರಹ್ಮಣ್ಯಂ ಸ್ವಾಮಿ, ರಾಹುಲ್ ಗಾಂಧಿ, ಅರವಿಂದ್ ಕೇಜ್ರಿವಾಲ್ ಸೇರಿದಂತೆ ಇತರರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರನ್ನೊಳಗೊಂಡ ನ್ಯಾಯಪೀಠ, ಸಂವಿಧಾನದ ಪರಿಚ್ಛೇಧ 19(1)ರ ಪ್ರಕಾರ ಅಭಿವ್ಯಕ್ತಿ ಸ್ವಾತಂತ್ರ್ಯ ಪರಮಾಧಿಕಾರವಲ್ಲ ಎಂದಿದೆ.
ಅರ್ಜಿದಾರರು ಕಾಯ್ದೆ 490 ಮತ್ತು 500 ಮಾನನಷ್ಟವನ್ನು ಕ್ರಿಮಿನಲ್ ವ್ಯಾಪ್ತಿಗೆ ಒಳಪಡಿಸುವುದರ ಸಾಂವಿಧಾನಿಕ ಅರ್ಹತೆಯನ್ನು ಪ್ರಶ್ನಿಸಿದ್ದರು.
ಇತರ ವ್ಯಕ್ತಿಗಳ ಹಕ್ಕುಗಳನ್ನು ಘಾಸಿಗೊಳಿಸದಂತೆ ಅಭಿವ್ಯಕ್ತಿ ಸ್ವಾತಂತ್ರ್ಯವಿರಬೇಕು, ಒಬ್ಬರಿಗೆ ಸಂವಿಧಾನ ಭರವಸೆ ನೀಡಿದ ಬದುಕುವ ಹಕ್ಕನ್ನು ಇನ್ನೊಬ್ಬರ ಅಭಿವ್ಯಕ್ತಿ ಸ್ವಾತಂತ್ರ್ಯ ಹರಣ ಮಾಡಬಾರದು ಎಂದು ಸುಪ್ರೀಂ ಅಭಿಪ್ರಾಯಪಟ್ಟಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.