ಲೇಹ್: ಕಾಶ್ಮೀರದ ಲೇಹ್ ಸಮೀಪವಿರುವ ಗ್ರಾಮದಲ್ಲಿನ ಸರಪಂಚ್ ಹಾಗೂ ನಿವಾಸಿಗಳಿಗೆ ಪಾಕಿಸ್ಥಾನ ಅಥವಾ ಚೀನಾದ ಶಂಕಿತ ಗೂಢಚರರು ಕರೆ ಮಾಡಿದ್ದಾರೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಭಾರತೀಯ ಸೇನೆ ಚೀನಾ ಗಡಿಯಲ್ಲಿ ಹೈ-ಅಲರ್ಟ್ ಘೋಷಿಸಿದೆ.
ಸ್ಥಳೀಯ ಅಧಿಕಾರಿಗಳ ಹೆಸರಿನಲ್ಲಿ ದೂರವಾಣಿ ಕರೆ ಮಾಡಿ ಸೇನೆಯ ಚಲನವಲನ, ಹಾಜರಿರುವ ಸಮಯದ ಬಗ್ಗೆ ವಿಚಾರಿಸುತ್ತಿರುವುದಾಗಿ ಮಾಹಿತಿ ದೊರೆತಿದೆ.
ಈ ಬಗ್ಗೆ ಸೇನೆಯ ಅಧಿಕಾರಿಗಳು ಪರಿಶೀಲಿಸಿದಾಗ ಹಲವಾರು ಗ್ರಾಮಗಳ ಗ್ರಾಮಸ್ಥರಿಂದ ಈ ರೀತಿ ಮಾಹಿತಿ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.
ಇತ್ತೀಚೆಗೆ ಭಾರತ-ಚೀನಾ ಗಡಿಯಲ್ಲಿ ಚೀನಾ ಹೆಚ್ಚಿನ ಸಂಖ್ಯೆಯಲ್ಲಿ ಸೈನಿಕರನ್ನು ನಿಯೋಜಿಸುತ್ತಿದೆ ಎಂದು ಅಮೇರಿಕ ಎಚ್ಚರಿಕೆ ನೀಡಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.