ನವದೆಹಲಿ: ಬ್ಯಾಂಕುಗಳಿಗೆ ಕೋಟ್ಯಾಂತರ ಹಣ ವಂಚಿಸಿ ಯುಕೆಯಲ್ಲಿ ಕುಳಿತಿರುವ ಉದ್ಯಮಿ ವಿಜಯ್ ಮಲ್ಯ ಅವರನ್ನು ಯುಕೆಯಲ್ಲಿ ಬಂಧಿಸುವ ಪ್ರಕ್ರಿಯೆಯನ್ನು ಜಾರಿ ನಿರ್ದೇಶನಾಲಯ ಆರಂಭಿಸಿದೆ.
ಈ ಬಗ್ಗೆ ಅದು ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಪತ್ರ ಬರೆದಿದ್ದು, ಹಣಕಾಸು ವಂಚನೆ ತಡೆ ನ್ಯಾಯಾಲಯದ ಕ್ಲಿಯರೆನ್ಸ್ಗಾಗಿ ಮನವಿ ಮಾಡಿದೆ.
ಒಂದು ತಿಂಗಳೊಳಗೆ ಎಲ್ಲಾ ಪ್ರಕ್ರಿಯೆಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಈ ಹಿಂದೆ ಯುಕೆ ಮಲ್ಯ ಅವರ ಗಡಿಪಾರು ಮತ್ತು ಬಂಧನಕ್ಕೆ ನಿರಾಕರಿಸಿತ್ತು. ನಿಖರ ದಾಖಲೆ ಹೊಂದಿರುವ ವ್ಯಕ್ತಿಯನ್ನು ಗಡಿಪಾರು ಮಾಡಲು ಸಾಧ್ಯವಿಲ್ಲ ಎಂದು ಅದು ಹೇಳಿತ್ತು. ಆದರೂ ಅವರನ್ನು ಭಾರತಕ್ಕೆ ಕರೆತರಲು ಬೇಕಾದ ಎಲ್ಲಾ ಅವಕಾಶಗಳನ್ನು ಬಳಸಿಕೊಳ್ಳುವುದಾಗಿ ಕೇಂದ್ರ ಹೇಳಿತ್ತು.
ಇತ್ತೀಚಿಗಷ್ಟೇ ಸಿಬಿಐ, ಜಾರಿ ನಿರ್ದೇಶನಾಲಯ ಮಲ್ಯ ವಿರುದ್ಧ ರೆಡ್ಕಾರ್ನರ್ ನೋಟಿಸ್ ಜಾರಿಗೊಳಿಸುವಂತೆ ಇಂಟರ್ಪೋಲ್ಗೆ ಮನವಿ ಮಾಡಿತ್ತು. ಹಣಕಾಸು ವಂಚನೆ ನ್ಯಾಯಾಲಯ ಈಗಾಗಲೇ ಅವರಿಗೆ ಸಮನ್ಸ್ ಜಾರಿಗೊಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.